ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕ ನದಿ ನೀರು ಹಾಗೂ ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷ ಕೆ.ಎಲ್. ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಜುನಾಥ್ ಅವರು1953ರಲ್ಲಿ ಜನಿಸಿದ್ದು, 1974ರಲ್ಲಿ ವಕೀಲರಾಗಿ ಹೈಕೋರ್ಟ್ನಲ್ಲಿ ಅಭ್ಯಾಸ ಆರಂಭಿಸಿ ಬಳಿಕ 2000ನೇ ಇಸವಿಯಲ್ಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. 2001ರಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರಾಗಿ ನೇಮವಾಗಿದ್ದರು.