ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕಲಬುರಗಿ
Mann Ki Baat: ಮನ್‌ ಕೀ ಬಾತ್‌ನಲ್ಲಿ ಕಲಬುರಗಿ ರೊಟ್ಟಿಯ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ!

ಮನ್‌ ಕೀ ಬಾತ್‌ನಲ್ಲಿ ಕಲಬುರಗಿ ರೊಟ್ಟಿಯ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ!

Mann Ki Baat: ಕಲಬುರಗಿ ಮಹಿಳೆಯರು ಸ್ವ ಸಹಾಯ ಸಂಘದ ಮೂಲಕ ನಿತ್ಯ 3 ಸಾವಿರ ರೊಟ್ಟಿ ಮಾಡುತ್ತಿದ್ದಾರೆ. ರೊಟ್ಟಿಯ ಘಮಲು ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಕಲಬುರಗಿಯ ರೊಟ್ಟಿ ದೊಡ್ಡ ನಗರಗಳ ಅಡುಗೆ ಮನೆಯನ್ನೂ ತಲುಪಿದೆ ಎಂದು ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Sanitary pads: ಆರೋಗ್ಯ ಇಲಾಖೆ ನಿರ್ಲಕ್ಷ್ಯ; ಹೆಣ್ಣು ಮಕ್ಕಳಿಗೆ ಸೇರಬೇಕಾದ 1 ಲಕ್ಷಕ್ಕೂ ಅಧಿಕ ಶುಚಿ ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ!

ಆರೋಗ್ಯ ಇಲಾಖೆ ನಿರ್ಲಕ್ಷ್ಯ; ಶುಚಿ ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ!

Sanitary pads: 2017ರಲ್ಲಿ ತಯಾರಿಸಿದ ಶುಚಿ ಸ್ಯಾನಿಟರಿ ಪ್ಯಾಡ್‌ಗಳನ್ನು ಹೆಣ್ಣು ಮಕ್ಕಳಿಗೆ ಕಳೆದ 8 ವರ್ಷಗಳಿಂದ ವಿತರಿಸದೆ ಕೋಣೆಯಲ್ಲಿ ಕೊಳೆಯುವಂತೆ ಮಾಡಲಾಗಿದೆ. ಈಗ ಅವಧಿ ಮುಗಿದ ಹಿನ್ನೆಲೆ ಉಪಯೋಗಕ್ಕೆ ಬರುವುದಿಲ್ಲ ಎನ್ನುವ ಸಬೂಬು ನೀಡಿರುವ ಅಧಿಕಾರಿಗಳು, ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ ಲಕ್ಷಾಂತರ ಶುಚಿ ಪ್ಯಾಡ್‌ಗಳಿಗೆ ಬೆಂಕಿ ಹಚ್ಚಲಾಗಿದೆ.

Moral Policing: ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

Moral Policing: ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬೈಲಪ್ಪ ಎಂಬ ಯುವಕ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಡ್ರಾಪ್ ನೀಡಿದ್ದ. ಇದನ್ನು ಕಂಡ ಅನ್ಯಕೋಮಿನ 15 ಯುವಕರು ಬೈಕ್ ಅಡ್ಡಗಟ್ಟಿ, ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆರೋಪಿಗಳ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Moral Policing: ಕಲಬುರಗಿಯಲ್ಲಿ ನೈತಿಕ ಪೊಲೀಸ್‌ ಗಿರಿ; ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಲಿಫ್ಟ್‌ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಮುಸ್ಲಿಂ ಯುವತಿಗೆ ಲಿಫ್ಟ್‌ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ!

Moral Policing: ಕಲಬುರಗಿ ನಗರದ ಆಸ್ಪತ್ರೆಯಲ್ಲಿ ನರ್ಸಿಂಗ್ ಸ್ಟಾಫ್‌ ಆಗಿದ್ದ ಮುಸ್ಲಿಂ ಯುವತಿಯನ್ನು ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡ್ರಾಪ್ ಕೊಡಲು ಬೈಕ್ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ. ಈ ವೇಳೆ ಆತನ ಮೇಲೆ ಮುಸ್ಲಿಂ ಯುವಕ ಗುಂಪು ಹಲ್ಲೆ ನಡೆಸಿದೆ.

Triple Murder Case: ಕೊಲೆಯಾದ ರೌಡಿಶೀಟರ್‌ ಪತ್ನಿಯ ಶಪಥ ಈಡೇರಿಸಲು ತ್ರಿವಳಿ ಕೊಲೆ! 10 ಆರೋಪಿಗಳ ಸೆರೆ

ಕೊಲೆಯಾದ ರೌಡಿಶೀಟರ್‌ ಪತ್ನಿಯ ಶಪಥ ಈಡೇರಿಸಲು ತ್ರಿವಳಿ ಕೊಲೆ! 10 ಮಂದಿ ಸೆರೆ

Triple Murder Case: ಕಳೆದ ವರ್ಷ ನವೆಂಬರ್ 12ರಂದು ರೌಡಿಶೀಟರ್ ಸೋಮನ ಕೊಲೆಯಾಗಿತ್ತು. ಮೊನ್ನೆ ಕೊಲೆಯಾದ ಸಿದ್ದಾರೂಢ ಹಾಗೂ ಕುಟುಂಬಸ್ಥರು ಸೋಮನನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಸೋಮು ಕೊಲೆ ಬಳಿಕ ಆತನ ಪತ್ನಿ ಭಾಗ್ಯಶ್ರೀ, ತನ್ನ ಗಂಡನ ಶವದ ಮುಂದೆ, ಗಂಡನ ಕೊಲೆಗೆ ಪ್ರತೀಕಾರ ತೀರುವ ತನಕ ತನ್ನ ಕೊರಳಿನಲ್ಲಿನ ಮಾಂಗಲ್ಯ ಸೂತ್ರ ತೆಗೆಯುವುದಿಲ್ಲ ಎಂದು ಶಪಥ ಮಾಡಿದ್ದಳು.

Triple Murder Case: ಕಲಬುರಗಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ, ಅಮಾನುಷವಾಗಿ ಕೊಚ್ಚಿ ಮೂವರ ಕೊಲೆ

ಕಲಬುರಗಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ, ಅಮಾನುಷವಾಗಿ ಕೊಚ್ಚಿ ಮೂವರ ಕೊಲೆ

Kalaburagi Triple Murder Case: ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಮೂವರೂ ಒಂದು ಢಾಬಾದಲ್ಲಿ ಕೆಲಸ ಮಾಡುತ್ತಿದ್ದರು. ದುಷ್ಕರ್ಮಿಗಳು ಆ ಢಾಬಾಗೇ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ.

House collapse: ಮಳೆ ಅವಾಂತರ; ಕಲಬುರಗಿಯಲ್ಲಿ ಮನೆ ಕುಸಿದು 10 ವರ್ಷದ ಬಾಲಕ ಸಾವು

ಕಲಬುರಗಿಯಲ್ಲಿ ಮನೆ ಕುಸಿದು 10 ವರ್ಷದ ಬಾಲಕ ಸಾವು

House collapse: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಗ್ರಾಮದಲ್ಲಿ ದುರಂತ ನಡೆದಿದೆ. ಕಲ್ಲು, ಮಣ್ಣಿನಿಂದ ನಿರ್ಮಿಸಿದ್ದ ಮನೆ ಶಿಥಿಲಗೊಂಡಿತ್ತು, ಮಳೆಯಿಂದಾಗಿ ಚಾವಣಿ ಕುಸಿದು ದುರಂತ ಸಂಭವಿಸಿದೆ. ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Wall collapses: ಮಹಾಮಳೆಗೆ ರಾಜ್ಯದಲ್ಲಿ ಮತ್ತೊಂದು ಬಲಿ; ಗೋಡೆ ಕುಸಿದು ಬಾಲಕ ಸಾವು

ಮನೆ ಗೋಡೆ ಕುಸಿದು ಬಾಲಕ ದಾರುಣ ಸಾವು

ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .

Pralhad Joshi: ʼಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ; ಇಂಡಿ ಒಕ್ಕೂಟ ವಿನಾಕಾರಣ ಭಯ ಬಿಟ್ಟು ಈಗಿಂದಲೇ ತಯಾರಿ ನಡೆಸಿಕೊಳ್ಳಲಿ: ಪ್ರಲ್ಹಾದ್‌ ಜೋಶಿ

ಒನ್‌ ನೇಷನ್‌ ಒನ್‌ ಎಲೆಕ್ಷನ್‌; ಕಾಂಗ್ರೆಸ್‌ನದ್ದು ಅರ್ಥವಿಲ್ಲದ ಆತಂಕ: ಜೋಶಿ

ಯಾವುದೇ ಸರ್ಕಾರ ವರ್ಷದ 12 ತಿಂಗಳೂ, ದಿನದ 24 ತಾಸೂ ಚುನಾವಣೆ ಮಾಡುತ್ತ ಕೂರಲು ಸಾಧ್ಯವಿಲ್ಲ. ಒಂದು ಎಂಎಲ್‌ಸಿ ಚುನಾವಣೆ ನಡೆದರೂ ಎಲ್ಲಾ ಬಂದ್‌ ಮಾಡುತ್ತೇವೆ. ಇದರಿಂದ ದೇಶಕ್ಕೇ ಆರ್ಥಿಕ ನಷ್ಟ. ಹಾಗಾಗಿ ಈ ವ್ಯವಸ್ಥೆ ಬದಲಿಸಲು ಕೇಂದ್ರ ಸರ್ಕಾರ ಭಾರತೀಯ ಸಂವಿಧಾನಕ್ಕೆ 129ನೇ ತಿದ್ದುಪಡಿ ಮೂಲಕ ಬದಲಾವಣೆ ತಂದು ಏಕ ಕಾಲಕ್ಕೆ ಚುನಾವಣೆ ನಡೆಸಲು ಯೋಜಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pralhad Joshi: ಕಾಂಗ್ರೆಸ್‌ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ, ಜಾತಿ ಗಣತಿ ರಾಜಕೀಯ ನಾಟಕವಷ್ಟೇ: ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್‌ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಕಾಂಗ್ರೆಸ್‌ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ʼಜಾತಿ ಗಣತಿʼ ವಿಷಯ ಹರಿಬಿಡುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

BY Vijayendra: ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸ: ಬಿ.ವೈ. ವಿಜಯೇಂದ್ರ

ರಾಜ್ಯ ಸರ್ಕಾರದಿಂದ ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸ: ವಿಜಯೇಂದ್ರ

BY Vijayendra: ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Murder Case: ಪ್ರೇಯಸಿ ಮನೆಗೆ ಹೋಗಿ ಹೆಣವಾದ ಯುವಕ; 4 ತಿಂಗಳ ಬಳಿಕ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸರು

ಪ್ರೇಯಸಿ ಮನೆಗೆ ಹೋಗಿ ಹೆಣವಾದ ಯುವಕ; ಪ್ರಕರಣ ಭೇದಿಸಿದ ಪೊಲೀಸರು

Kalaburagi News: ಜನವರಿ 30 ರಂದು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಆನೂರು ಗ್ರಾಮದಲ್ಲಿ ಖಜೂರಿ ಗ್ರಾಮದ ರಾಹುಲ್ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಸಂಬಂಧ ಒಟ್ಟು 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಕಲಬುರಗಿ ಎಸ್​​ಪಿ ಅಡ್ಡೂರು ಶ್ರೀನಿವಾಸುಲು ಮಾಹಿತಿ ನೀಡಿದ್ದಾರೆ.

Ahmedabad Plane Crash: ವಿಮಾನ ದುರಂತದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ: ಮಲ್ಲಿಕಾರ್ಜುನ ಖರ್ಗೆ

ವಿಮಾನ ದುರಂತದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ: ಮಲ್ಲಿಕಾರ್ಜುನ ಖರ್ಗೆ

Ahmedabad Plane Crash: ಅಹಮದಾಬಾದ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಮ್ಮ ಪಕ್ಷದ ವತಿಯಿಂದ ಏನು ಸಹಾಯ ಮಾಡಬೇಕೋ ಅದನ್ನು ಮಾಡುತ್ತೇವೆ. ಈ ಬಗ್ಗೆ ಗುಜರಾತ್ ಕಾಂಗ್ರೆಸ್ ಘಟಕಕ್ಕೆ ಸೂಚಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

Kalaburagi News: ಕಳೆದು ಹೋಗಿದ್ದ 46.54 ಲಕ್ಷ ಮೌಲ್ಯದ 225 ಮೊಬೈಲ್ ಪತ್ತೆ; ಕಲಬುರಗಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

ಕಲಬುರಗಿಯಲ್ಲಿ ಕಳೆದು ಹೋಗಿದ್ದ 46.54 ಲಕ್ಷ ಮೌಲ್ಯದ 225 ಮೊಬೈಲ್ ಪತ್ತೆ!

Kalaburagi News: ದೂರುಗಳ ಸಂಬಂಧ ಮೊಬೈಲ್‌ಗಳ ಪತ್ತೆಗಾಗಿ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಮುಂದಾಳತ್ವದಲ್ಲಿ ತಾಂತ್ರಿಕ ಮತ್ತು ಸೆನ್ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಒಳಗೊಂಡ ತನಿಖಾ ತಂಡ ರಚಿಸಿ, ಮೊಬೈಲ್‌ಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

ರೈಲ್ವೆ ಡಿವಿಜನ್‌ ಗಾಗಿ ಫೈಟ್‌ ಕ್ರೆಡಿಟ್‌ ಪಾಲಿಟಿಕ್ಸ್‌ ವಾರ್

ರೈಲ್ವೆ ಡಿವಿಜನ್‌ ಗಾಗಿ ಫೈಟ್‌ ಕ್ರೆಡಿಟ್‌ ಪಾಲಿಟಿಕ್ಸ್‌ ವಾರ್

1984ರಲ್ಲಿ ನ್ಯಾ.ಸರಿನ್ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದಾಗಿನಿಂದ ಈ ಬೇಡಿಕೆಯಿದ್ದರೂ ಸರಕಾರ ಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ ಎದ್ದುಕಾಣುತ್ತಿದೆ. ಅಂದಿನ ಯುಪಿಎ-2 ಸರಕಾರದಲ್ಲಿ ರೈಲ್ವೆ ಸಚಿವ ರಾಗಿದ್ದ ಡಾ.ಮಲ್ಲಿಕಾರ್ಜುನ ಖರ್ಗೆ ಅವರು 2013ರಲ್ಲಿ ಕಲಬುರಗಿ ರೈಲ್ವೆ ವಿಭಾಗೀಯ ಕೇಂದ್ರಕ್ಕೆ ಮಂಜೂರು, ಮಾಡಿ, 2014ರಲ್ಲಿ ಶಂಕುಸ್ಥಾಪನೆ ಸಹ ನೆರವೇರಿಸಿದರು.

Kalaburagi Murder Case: ನಜಮುದ್ದೀನ್ ಕೊಲೆ ಪ್ರಕರಣ; 24 ಗಂಟೆಯಲ್ಲೇ ಆರು ಆರೋಪಿಗಳ ಹೆಡೆಮುರಿಕಟ್ಟಿದ ಖಾಕಿ

ನಜಮುದ್ದೀನ್ ಕೊಲೆ ಪ್ರಕರಣ; 24 ಗಂಟೆಯಲ್ಲೇ ಆರು ಆರೋಪಿಗಳ ಸೆರೆ

Kalaburagi Murder Case: ಕೆಲವು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ ನಜಮುದ್ದೀನ್‌ನನ್ನು ಕಲಬುರಗಿ ನಗರದ ಹೊರವಲಯದ ಕೂಡಿ ದರ್ಗಾದ ಸಮೀಪ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Murder Case: ಸಹಜೀವನ ನಡೆಸುತ್ತಿದ್ದವನೇ ಮಹಿಳೆಯ ಹತ್ಯೆಗೈದು ಶವ ಸುಟ್ಟುಹಾಕಿದ!; ಇಬ್ಬರು ಅರೆಸ್ಟ್

ಸಹಜೀವನ ನಡೆಸುತ್ತಿದ್ದವನಿಂದಲೇ ಮಹಿಳೆಯ ಹತ್ಯೆ!

Murder Case: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಡಿಯಾರ ತಾಂಡಾದ ಮಹಿಳೆಯನ್ನು ಹತ್ಯೆ ಮಾಡಿ, ಪೆಟ್ರೋಲ್‌ ಸುರಿದು ಶವವನ್ನು ಸುಟ್ಟುಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Murder Case: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Murder Case: ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಫಿರೋಜಾಬಾದ ಬಳಿ ಜರುಗಿದೆ. ನಿಜಾಮುದ್ದೀನ್ ಬಾವರಚಿ ಅಲಿಯಾಸ್ ನಜ್ಜು (45) ಮೃತ ವ್ಯಕ್ತಿಯಾಗಿದ್ದು, ಹಳೆ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

N. Ravikumar: ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎಂಎಲ್‌ಸಿ ಎನ್.ರವಿಕುಮಾರ್ ವಿಚಾರಣೆಗೆ ಹಾಜರು

ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎನ್.ರವಿಕುಮಾರ್ ವಿಚಾರಣೆಗೆ ಹಾಜರು

N. Ravikumar: ಹೈಕೋರ್ಟ್ ಸೂಚನೆ ಮೇರೆಗೆ ಎನ್.ರವಿಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ದಕ್ಷಿಣ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿರಬಹುದು ಎಂದು ಹೇಳಿಕೆ ನೀಡಿದ್ದ ಹಿನ್ನೆಲೆ ಬಿಜೆಪಿ ಎಂಎಲ್‌ಸಿ ವಿರುದ್ಧ ಕೇಸ್‌ ದಾಖಲಾಗಿತ್ತು.

Heart Failure: ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು

ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು

ಯಾವ ಹೃದಯದ ಸಮಸ್ಯೆಯೂ ಕಾಣಿಸಿಕೊಳ್ಳದ ಯುವಕ ಯುವತಿಯರಲ್ಲಿ ಇದ್ದಕ್ಕಿದ್ದಂತೆ ಹೃದಯ ವೈಫಲ್ಯದಿಂದ (Heart Failure) ಸಾವನ್ನು ಅಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಕಳವಳ ಹೆಚ್ಚುತ್ತಿದೆ. ಇದಕ್ಕೆ ಕಲಬುರಗಿಯಲ್ಲಿ ಮೆರವಣಿಗೆ ವೇಳೆ ಯುವಕನ ಸಾವು ಸಹ ಸೇರಿಕೊಂಡಿದೆ.

Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

Kalaburagi DC: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್

ಕಲಬುರಗಿ ಜಿಲ್ಲಾಧಿಕಾರಿ ವಿರುಧ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ವಿರುದ್ಧ ಪಾಕಿಸ್ತಾನಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸದ್ಯ ರವಿಕುಮಾರ್ ಹೇಳಿಕೆ ಸಂಚಲನ ಸೃಷ್ಟಿಸಿದೆ.

Fire Accident: ಆಳಂದದಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ಪಠ್ಯ ಪುಸ್ತಕಗಳು ಸುಟ್ಟು ಭಸ್ಮ

ಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿ

Fire Accident: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಅಗ್ನಿ ಅವಘಡ ನಡೆದಿದೆ. ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

Gims Hospital: ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಲಿಫ್ಟ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಎಚ್ಚೆತ್ತುಕೊಂಡು ಎಲ್ಲರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೆವೆ ಎಂದು‌ ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಿವಕುಮಾರ್ ತಿಳಿಸಿದ್ದಾರೆ.