ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ
ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಗುರುವಾರ (ಫೆ. 27) ಬೆಳಗ್ಗೆ ಲೋಕಾಯುಕ್ತದ 5 ತಂಡಗಳು ದಾಳಿ ನಡೆಸಿವೆ. ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ವಿವಿಧ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
Mahashivratri 2025: ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ. ಆಂದೋಲ ಶ್ರೀ ಹೊರತು ಪಡಿಸಿ 15 ಜನರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಅನುಮತಿ ನೀಡುವಂತೆ ಹಿಂದು ಸಂಘಟನೆಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಕಲಬುರಗಿ ಪೀಠ, ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಿದೆ.
Heart attack: ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕಲಬುರಗಿ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರು. ಸಿಬ್ಬಂದಿಗಳು ಕಾರ್ಮಿಕನ ಮೃತದೇಹವನ್ನು ನಾಯಿಯ ಹೆಣ ಒಯ್ಯುವಂತೆ ಎಳೆದೊಯ್ದರು. ಮೃತರನ್ನು ಬಿಹಾರ ಮೂಲದ ಚಂದನ್ ಸಿಂಗ್ (35) ಎಂದು ಗುರುತಿಸಲಾಗಿದೆ.
ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು, ʼʼಹೈಕಮಾಂಡ್ ಈಗ ಕಲಬುರಗಿಯಲ್ಲೇ ಇದ್ದಾರೆ. ಅವರು ಬಂದಾಗ ಕೇಳಿ. ಅವರೇ ಹೇಳ್ತಾರೆ. ಕೆಪಿಸಿಸಿ ಅಧ್ಯಕ್ಷರು, ಸಚಿವರ ಬದಲಾವಣೆ ಎಲ್ಲವು ಹೈಕಮಾಂಡ್ ತೀರ್ಮಾನ ಮಾಡುತ್ತೆʼʼ ಎಂದು ತಿಳಿಸಿದ್ದಾರೆ.
ರೋಗವು ವಿಶೇಷವಾಗಿ ಸಮಶೀತೋಷ್ಣ ವಲಯದ ರಾಷ್ಟ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಇವುಗಳಲ್ಲಿ ಭಾರತ ದೇಶವು ಕೂಡಾ ಒಂದಾಗಿದೆ. 2025ರ ಫೆ.10 ರಿಂದ 28 ವರೆಗೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು/ವಸತಿ ನಿಲಯಗಳು/ಎಲ್ಲಾ ಸರಕಾರಿ ಕಚೇರಿ ಮತ್ತು ಸಂಘ-ಸಂಸ್ಥೆಗಳಿಗೆ, ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲಾ ಮನೆ ಮನೆಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡುತ್ತಾರೆ
Mallikarjun Kharge: ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಬಗ್ಗೆ ಕಲಬುರಗಿ ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ಟ್ರಂಪ್ ಈಗಾಗಲೇ ಇಂಪೋರ್ಟ್ ಟ್ಯಾರಿಫ್ ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ನಮ್ಮ ಎಂಜಿನಿಯರಗಳು, ಡಾಕ್ಟರ್‌ಗಳನ್ನು ಯಾವಾಗ ಬೇಕೋ ಅವಾಗ ತಗೊಳ್ಳೋದು, ನಂತರ ನಿರ್ಬಂಧ ಹಾಕೋದು ಸರಿನಾ? ಟ್ರಂಪ್‌ನಿಂದ ನಮ್ಮ ದೇಶಕ್ಕೆ ಒಳ್ಳೆಯದಾಗುತ್ತೆ ಅಂತ ನಂಬೋದು ಹೇಗೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಕಾನೂನು ರೀತಿಯಲ್ಲಿ ಅನುಮತಿ ಪಡೆದು ಸಂಸ್ಥೆಯಲ್ಲಿ ಇದ್ದ ನಿಷ್ಪ್ರಯೋಜಕ ದಾಖಲೆಗಳನ್ನು ಸುಟ್ಟು ಹಾಕಿದ್ದನ್ನು ಅವುಗಳು ಮಹತ್ವದ ದಾಖಲೆಗಳೆಂದು ಸುಳ್ಳು ಆರೋಪ ಹೊರಿಸಿದ್ದ ಪ್ರಕರಣ ಗಳನ್ನೆಲ್ಲ ಹೈಕೋರ್ಟ್ ರದ್ದು ಪಡಿಸಿ ಆದೇಶ ನೀಡಿದ್ದು ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಹೈದರಾ ಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು
ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ. ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.