Tuesday, 21st March 2023

ಜಿ.ವಿ ನಿಧನ ನಾಡಿಗೆ ತುಂಬಲಾರದ ನಷ್ಟ: ಜೆಡಿಎಸ್‌ ವರಿಷ್ಠ ಹೆಚ್.ಡಿ.ದೇವೇಗೌಡ

ಬೆಂಗಳೂರು: ಕನ್ನಡದ ನಿಘಂಟು ತಜ್ಞ, ಶಬ್ದಬ್ರಹ್ಮ ಹಾಗೂ ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ವೆಂಕಟಸುಬ್ಬಯ್ಯ ಅವರ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಜಿ.ವಿ.ಅವರ ಕೊಡುಗೆ ಅಪಾರವಾದದ್ದು, ನಮ್ಮ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ದೇವೇಗೌಡರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಜಿ.ವಿ.ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಭಗವಂತ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಹೇಳಿದ್ದಾರೆ.

ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾ ಮಿ ಕಂಬನಿ ಮಿಡಿದಿದ್ದಾರೆ. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು, ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕರನ್ನು ರಾಜ್ಯ ಕಳೆದುಕೊಂಡಂತಾಗಿದೆ ಎಂದು ಗುಣಗಾನ ಮಾಡಿದ್ದಾರೆ.

error: Content is protected !!