ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಜೋಶಿ
ರಾಜ್ಯದಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಹಣವಿಲ್ಲ ಎಂಬ ನೆಪ ಹೇಳುವ ಕಾಂಗ್ರೆಸ್ ಸರ್ಕಾರ, ಕೇವಲ ಮತಬ್ಯಾಂಕ್ ಅನ್ನೇ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ. ಇದು ಸಂವಿಧಾನದ ಸಮಾನತೆಯ ತತ್ತ್ವಗಳಿಗೆ ಸ್ಪಷ್ಟ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.