Friday, 24th September 2021

ಸೆ.27 ರಂದು ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗು ವುದು ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೃಷಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಭಾರತೀಯ ಕಿಸಾನ್ ಮೋರ್ಚಾ ಸೆ.27 ರಂದು ಭಾರತ ಬಂದ್ ಗೆ ಕರೆ ನೀಡಿದೆ. ಇದನ್ನು ಬೆಂಬಲಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು ಕರ್ನಾಟಕ ಬಂದ್ ಮಾಡಬೇಕೆಂದು ಹೇಳಿದ್ದಾರೆ.

ಸೆ.27 ರಂದು ರಾಜ್ಯದಲ್ಲಿ ಸಂಪೂರ್ಣ ಬಂದ್ ಆಚರಿಸಬೇಕು. ಎಲ್ಲ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಅಂಗಡಿ ಮುಂಗಟ್ಟು ಬಂದ್ ಆಗಬೇಕೆಂದು ಹೇಳಿದ್ದು, ಬಂದ್ ಯಶಸ್ಸಿಗಾಗಿ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬೆಂಬಲ ಕೋರಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *