Friday, 18th June 2021

ರಾಜ್ಯ ಕಾಂಗ್ರೆಸ್‌ ಘಟಕದಿಂದ 100-ನಾಟೌಟ್ ಹೆಸರಿನಲ್ಲಿ ಪ್ರತಿಭಟನೆ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಸವಾರಿ ಮಾಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ಶುಕ್ರವಾರ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು. ಈ ಪ್ರತಿಭಟನೆ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಮತ್ತಿರರು ಭಾಗವಹಿಸಿದ್ದರು.

ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 29 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 28 ಪೈಸೆ ಹೆಚ್ಚಳ ಮಾಡಲಾಗಿದೆ.

Leave a Reply

Your email address will not be published. Required fields are marked *