Friday, 18th June 2021

ನಾಳೆ ರಾತ್ರಿಯಿಂದ ಕರ್ನಾಟಕ 15 ದಿನ ’ಲಾಕ್‌’ ಡೌನ್‌

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಯಲ್ಲಿ ಮತ್ತೆ 15 ದಿನ ಲಾಕ್ ಡೌನ್ ಜಾರಿಗೆ ತರಲು ರಾಜ್ಯ ಸರ್ಕಾರ ಸೋಮ ವಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಏಪ್ರಿಲ್ 27ರಿಂದಲೇ ಲಾಕ್ ಡೌನ್ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಬೆಂಗಳೂರಿನಲ್ಲಿ ಜನತಾ ಕರ್ಪ್ಯೂ ಮಾದರಿಯಲ್ಲಿ ಲಾಕ್ ಮಾಡಲು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಇಟ್ಟಿದ್ದರು ಎಂದು ಹೇಳಲಾಗು ತ್ತಿದೆ. ಆದರೆ, 15 ದಿನಕ್ಕೆ ಲಾಕ್‌ಡೌನ್‌ ಮುಗಿಯಲ್ಲ ಎಂದು ಕೂಡ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *