ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gulf war: ಇರಾನ್-‌ ಇಸ್ರೇಲ್‌ ಯುದ್ಧದ ಪರಿಣಾಮ ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನ ಹಾರಾಟ ರದ್ದು

ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಯುದ್ಧದ ಪರಿಣಾಮ ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನ ಹಾರಾಟ ರದ್ದು

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Mar 10, 2026 1:11 PM

ಬೆಂಗಳೂರು, ಮಾ.10: ಇರಾನ್-ಇಸ್ರೇಲ್ ಯುದ್ಧ (Gulf war) ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಬೆಂಗಳೂರಿಗೆ (Bengaluru) ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda international Airport) 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ.

ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಸರಕು ಸೇವೆಗಳ ಮೇಲೂ ಪರಿಣಾಮ ಬೀರಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಸಮರ ಆರಂಭವಾದಾಗಿನಿಂದ ದೈನಂದಿನ ಸರಕು ಸಾಗಣೆಯಲ್ಲಿ ಸುಮಾರು 25 ರಿಂದ 30% ರಷ್ಟು ಕುಸಿತ ಕಂಡಿದೆ.

ಯೂಟರ್ನ್ ಮಾಡಿ ದೆಹಲಿಗೆ ಮರಳಿದ ಮ್ಯಾಂಚೆಸ್ಟರ್‌ಗೆ ಹೊರಟಿದ್ದ ಇಂಡಿಗೋ ವಿಮಾನ; ಕಾರಣವೇನು?