ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಏ. 1ರಿಂದ 5ರವರೆಗೆ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು

CM Siddaramaiah: ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಏ. 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಏ. 1ರಿಂದ 5ರವರೆಗೆ ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು

ತುಂಗಭದ್ರಾ ಡ್ಯಾಮ್‌.

Profile Ramesh B Mar 30, 2025 7:43 PM

ಬೆಂಗಳೂರು: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ರೈತರಿಗೆ ಯುಗಾದಿ (Ugadi 2025) ಕೊಡುಗೆಯಾಗಿ ಭದ್ರಾ ಜಲಾಶಯದಿಂದ (Tungabhadra Dam) ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಏ. 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.

ಮಾ. 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11 ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14 ಟಿಎಂಸಿ ಅಗತ್ಯವಿದ್ದು, 3 ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಏ. 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Chief Minister's medal: 219 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ

ರೈತರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲ ಹಂತದಲ್ಲೂ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಪ್ರಕಟಣೆ ಹೊರಡಿಸಿದ್ದಾರೆ. ಮಾ. 30ರ ಮಾಹಿತಿ ಪ್ರಕಾರ ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 ಟಿಎಂಸಿ ನೀರು ಸಂಗ್ರಹವಾಗಿದೆ. ಮೇ 8ರವರೆಗೆ 11 ಟಿಎಂಸಿ ನೀರು ನೀರಾವರಿಗಾಗಿ ಅಗತ್ಯವಿದೆ. ಜಲಾಶಯದ ಎಂಜಿನಿಯರ್‌ಗಳ ಲೆಕ್ಕಾಚಾರದ ಪ್ರಕಾರ, ಮೇಲ್ಡಂಡೆ ಮತ್ತು ಕೆಳದಂಡೆ ಸೇರಿದಂತೆ 14 ಟಿಎಂಸಿ ಕುಡಿಯುವ ನೀರಿನ ಆವಶ್ಯಕತೆ ಇದೆ. ಇದರಿಂದ ಉಳಿದ ಶುದ್ಧ ನೀರಿನ ಲಭ್ಯತೆ 3 ಟಿಎಂಸಿ ಮಾತ್ರ.

ʼʼತುಂಬಾಭದ್ರಾ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ ಕನಿಷ್ಠ 3.5 ಟಿಎಂಸಿ ನೀರಿನ ಸಂಗ್ರಹ ಅಗತ್ಯವಿದೆ. ಆದ್ದರಿಂದ ಕೊಪ್ಪಳ ಜಿಲ್ಲೆಯ ರೈತರ ನೀರಾವರಿ ಅಗತ್ಯಗಳನ್ನು ಪರಿಗಣಿಸಿ, ಭದ್ರಾದಿಂದ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಇದರಿಂದಾಗಿ ತುಂಗಭದ್ರಾ ಕಾಲುವೆಗೆ ಏ. 1ರಿಂದ 5ರವರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರಿಗಾಗಿ ಮತ್ತು ಬೆಳೆಗಳಿಗಾಗಿ ನೀರು ಬಿಡುಗಡೆ ಮಾಡಲಾಗುತ್ತದೆ. ಏ. 5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜು ಮಾತ್ರ ಇರುತ್ತದೆ ಎಂದು ವಿವರಿಸಲಾಗಿದೆ.