Deepavali festival: ದೀಪಾವಳಿ ಹಬ್ಬದ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿಯಿಂದ 2500 ಹೆಚ್ಚುವರಿ ಬಸ್
Bengaluru: ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳಲಿವೆ. ಈ ಹೆಚ್ಚುವರಿ ಬಸ್‌ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ಅ.22ಹಾಗೂ 26ರಂದು ಸೇವೆ ನೀಡಲಿವೆ.

-

ಬೆಂಗಳೂರು : ದೀಪಾವಳಿ (Deepavali festival) ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ (Bengaluru) ಬೇರೆ ಬೇರೆ ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಕಾರಣ ಅ.17ರಿಂದ 20ರವರೆಗೆ ಕೆಎಸ್‌ಆರ್‌ಟಿಸಿ (KSRTC buses) ಕಡೆಯಿಂದ 2,500 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಅ.20ರಂದು ನರಕ ಚತುರ್ದಶಿ ಮತ್ತು ಅ.22ರಂದು ಬಲಿಪಾಡ್ಯಮಿ ಹಬ್ಬವಿದೆ. ಅದರ ಜತೆಗೆ ಅ.18 ಮತ್ತು 19 ವಾರಾಂತ್ಯವಾಗಿದೆ. ಹೀಗಾಗಿ ಐದು ದಿನಗಳ ಸುದೀರ್ಘ ರಜೆ ಇರಲಿದ್ದು, ಭಾರಿ ಸಂಖ್ಯೆಯಲ್ಲಿ ರಾಜಧಾನಿಯ ಜನತೆ ಊರುಗಳತ್ತ ಧಾವಿಸಲಿದ್ದಾರೆ.
ಈ ಕಾರಣದಿಂದ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಮತ್ತು ಹೊರರಾಜ್ಯಗಳ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳಲಿವೆ. ಈ ಹೆಚ್ಚುವರಿ ಬಸ್‌ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ಅ.22ಹಾಗೂ 26ರಂದು ಸೇವೆ ನೀಡಲಿವೆ.
ಬಸ್‌ಗಳ ಕಾರ್ಯಾಚರಣೆ ಕುರಿತು ಹೆಚ್ಚಿನ ಮಾಹಿತಿ ಹಾಗೂ ಮುಂಗಡ ಟಿಕೆಟ್ ಕಾಯ್ದಿರಿಸಲು ನಿಗಮದ ವೆಬ್‌ಸೈಟ್ www.ksrtc.karnataka.gov.in ಗೆ ಭೇಟಿ ನೀಡಬಹುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Deepavali Shopping 2025: ಶುರುವಾಯ್ತು ದೀಪಾವಳಿಯ ಭರ್ಜರಿ ಶಾಪಿಂಗ್
ಬೆಂಬಲ ಬೆಲೆಗೆ ನೋಂದಣಿ ಮಾಡಿಕೊಳ್ಳಿ
ಚಿಕ್ಕಬಳ್ಳಾಪುರ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಸಿರಿಧಾನ್ಯ ಮತ್ತು ಬಿಳಿ ಜೋಳ ಮಾರಾಟ ಮಾಡಲು ಇಚ್ಛಿಸುವ ರೈತರ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಆಸಕ್ತ ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ತೆರೆದಿರುವ ನೋಂದಣಿ ಕೇಂದ್ರಗಳನ್ನು ಸಂಪರ್ಕಿಸಿ ಕೂಡಲೆ ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ರೈತರಲ್ಲಿ ಮನವಿ ಮಾಡಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ "ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ರಾಗಿ, ಕಿರು ಸೀರಿಧಾನ್ಯ, ಭತ್ತ ಮತ್ತು ಬಿಳಿಜೋಳ ಖರೀದಿ" ಕುರಿತ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ೨೦೨೪-೨೫ ನೇ ಸಾಲಿನಲ್ಲಿ ೯೭,೮೬೯ ಕ್ವಿಂಟಲ್ ರಾಗಿಯನ್ನು ಖರೀದಿ ಮಾಡಿ ೪೧.೮೨ ಕೋಟಿ ರೂ ಮೊತ್ತವನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ೬,೪೯೭ ರೈತರ ಖಾತೆಗಳಿಗೆ ಹಣ ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.