Karnataka CM Office: ಸಿಎಂ ಸಚಿವಾಲಯ ಕರ್ತವ್ಯದಿಂದ 30 ಸಿಬ್ಬಂದಿ ವಜಾ
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗೆ ನಿನ್ನೆ ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.


ಬೆಂಗಳೂರು: ಕರ್ನಾಟಕ ಸರ್ಕಾರದ (Karnataka Government) ಸಿಎಂ ಸಚಿವಾಲಯದ (Karnataka CM Office) ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ (Contract employees) ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ನಿನ್ನೆ ಅಪರಾಹ್ನದಿಂದಲೇ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರು ಸೇವೆಯಿಂದ ವಜಾಗೊಂಡಿದ್ದಾರೆ.
ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. 30 ಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಅವರ ಸೇವೆ ಅವಶ್ಯಕತೆ ಇಲ್ಲದ ಕಾರಣ ಕರ್ತವ್ಯದಿಂದ ಏಕಾಏಕಿ ತೆಗೆದುಹಾಕಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗೆ ನಿನ್ನೆ ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 30 ಜನರನ್ನು ವಜಾಗೊಳಿಸಲಾಗಿದೆ.
ಡೀಸೆಲ್ ದರ 2 ರೂ. ಏರಿಕೆ
ಬೆಂಗಳೂರು: ನಿನ್ನೆ ಮಧ್ಯರಾತ್ರಿಯಿಂದ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 2 ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ಮಾರಾಟ ತೆರಿಗೆ ದರವನ್ನು ಶೇಕಡಾ 21.17ಕ್ಕೆ ಏರಿಸಲಾಗಿದೆ. ಹೀಗಾಗಿ ಪ್ರತಿ ಲೀಟರ್ ಮೇಲೆ 2 ರೂಪಾಯಿ ಏರಿಕೆಯಾಗಿದೆ. ಏರಿಕೆ ಬಳಿಕ ಕರ್ನಾಟಕದಲ್ಲಿ ಡೀಸೆಲ್ ಮಾರಾಟ ದರ 91.02 ರೂಪಾಯಿ ಆಗಿದೆ. ಪರಿಷ್ಕೃತ ಮಾರಾಟ ದರವೂ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇರುತ್ತದೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ಹೇಳಿದೆ.
ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದ ಬಳಿಕ ಇದನ್ನು ಸಮರ್ಥಸಿಕೊಂಡಿದೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಡೀಸೆಲ್ ಬೆಲೆ ದುಬಾರಿಯಾಗಿಲ್ಲ ಎಂದಿದೆ. ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿನ ಡೀಸೆಲ್ ಬೆಲೆ ಉಲ್ಲೇಖಿಸಿದೆ. ಬಳಿಕ ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಏರಿಕೆ ಮಾಡಿದರೂ ಕರ್ನಾಟದಲ್ಲಿ ಡೀಸೆಲ್ ಬೆಲೆ ಕಡಿಮೆ ಎಂದಿದೆ.
ಇದನ್ನೂ ಓದಿ: Toll price hike: ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್! ಟೋಲ್ ದರದಲ್ಲೂ ಏರಿಕೆ