ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Earned leave: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೌಕರರಿಗೆ ಗುಡ್‌ ನ್ಯೂಸ್;‌ ವರ್ಷಕ್ಕೆ 30 ದಿನ ಗಳಿಕೆ ರಜೆ

Earned leave: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರು ಇಲಾಖೆಯ ಆಯುಕ್ತರಿಗೆ ಬರೆದ ಪತ್ರದ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಗಳಿಕೆ ರಜೆಯನ್ನು (EL) ಪಡೆಯಲು ಮಂಜೂರಾತಿ ನೀಡಿರುವುದರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದೆ.

ಹಿಂದುಳಿದ ವರ್ಗಗಳ ಇಲಾಖೆ ನೌಕರರಿಗೆ ವರ್ಷಕ್ಕೆ 30 ದಿನ ಗಳಿಕೆ ರಜೆ

Profile Prabhakara R Apr 13, 2025 5:57 PM

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಲಯ ಮೇಲ್ವಿಚಾರಕರು ಹಾಗೂ ನಿಲಯ ಪಾಲಕರನ್ನು ರಜಾ ರಹಿತ ಸಿಬ್ಬಂದಿ ಎಂದು ಪರಿಗಣಿಸಲಾಗಿದ್ದು, ಪ್ರತಿ ವರ್ಷ 30 ದಿನ ಗಳಿಕೆ (EL-Earned leave) ರಜೆಯನ್ನು ಪಡೆಯಲು ಮಂಜೂರಾತಿ ಆದೇಶವನ್ನು ನೀಡಲಾಗಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಎಂ. ಬಾಟಿ ಆದೇಶ ಹೊರಡಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರು ಇಲಾಖೆಯ ಆಯುಕ್ತರಿಗೆ ಬರೆದ ಪತ್ರದ ಅನ್ವಯ ಈ ಆದೇಶ ಹೊರಡಿಸಲಾಗಿದೆ. ನೌಕರರ ಸಂಘದ ಅಧ್ಯಕ್ಷರು ಬರೆದ ಪತ್ರದಲ್ಲಿ ಪ್ರಮುಖ 8 ಬೇಡಿಕೆಗಳನ್ನು ಸಲ್ಲಿಸಿದ್ದು, ಅದರಲ್ಲಿ 2ನೇ ಬೇಡಿಕೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ನಿಲಯ ಪಾಲಕರನ್ನು ರಜಾ ರಹಿತ ಇಲಾಖಾ ವ್ಯಾಪ್ತಿಯಲ್ಲಿ ತರುವುದು ಆಗಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎರಡು ಇಲಾಖೆಗಳ ವಿದ್ಯಾರ್ಥಿನಿಲಯಗಳ ಸಿಬ್ಬಂದಿ ಕರ್ತವ್ಯ ಹಾಗೂ ಜವಾಬ್ದಾರಿಗಳು ಒಂದೇ ಸಮಾನಾಂತರವಾಗಿದ್ದು, ಸರ್ಕಾರದ ಸವಲತ್ತುಗಳನ್ನು ನೀಡುವಲ್ಲಿ ಈ ರೀತಿಯ ತಾರತಮ್ಯವಿರುವುದು ಸಮಂಜಸವಾಗಿರುವುದಿಲ್ಲ. ಆದ್ದರಿಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೌಕರರನ್ನು ರಜಾ ಸಹಿತ ಇಲಾಖಾ ನೌಕರರ ಬದಲಾಗಿ, ರಜಾ ರಹಿತ ಇಲಾಖಾ ನೌಕರರೆಂದು ಪರಿಗಣಿಸಲು ನೌಕರರ ಸಂಘದ ಅಧ್ಯಕ್ಷರು ಕೋರಿದ್ದರು.

Govt Order

ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯ ಆದೇಶದ ಮಾದರಿಯಲ್ಲಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಲಯ ಪಾಲಕರು ಹಾಗೂ ನಿಲಯ ಮೇಲ್ವಿಚಾರಕರನ್ನು ರಜಾ ರಹಿತ ಸಿಬ್ಬಂದಿ ಎಂದು ಪರಿಗಣಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳು, ನಿಯಮ 118ರ ಪ್ರಕಾರ ಪ್ರತಿ ವರ್ಷಕ್ಕೆ 30 ದಿನಗಳ ಗಳಿಕೆ ರಜೆಯನ್ನು ಪಡೆಯಲು ಮಂಜೂರಾತಿ ಆದೇಶವನ್ನು ನೀಡಿದೆ. ಈ ಆದೇಶಕ್ಕೆ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಎಂ. ಬಾಟಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Lorry owners Strike: ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ; ಡೀಸೆಲ್ ದರ, ಟೋಲ್ ಶುಲ್ಕ ಹೆಚ್ಚಳಕ್ಕೆ ವಿರೋಧ