ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

45 Movie: ಬಹು ನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ; ಆ.15ಕ್ಕೆ ಸಿನಿಮಾ ರಿಲೀಸ್‌

45 Movie: ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಪ್ಯಾನ್ ಇಂಡಿಯಾ ʼ45ʼ ಚಿತ್ರದ ಟೀಸರ್‌ಗೆ ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾಷೆಗಳ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಟೀಸರ್‌ನಲ್ಲೇ ಮೋಡಿ ಮಾಡಿರುವ ಈ ಚಿತ್ರ ಆಗಸ್ಟ್ 15 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

ಮಲ್ಟಿಸ್ಟಾರರ್ ʼ45ʼ ಚಿತ್ರ ಆ.15ಕ್ಕೆ ರಿಲೀಸ್‌; ಟೀಸರ್‌ಗೆ ಭಾರಿ ಮೆಚ್ಚುಗೆ

Profile Siddalinga Swamy Apr 12, 2025 6:57 PM

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ʼಸೂರಜ್ ಪ್ರೊಡಕ್ಷನ್ʼ ಬ್ಯಾನರ್‌ನಲ್ಲಿ ಅದ್ಧೂರಿಯಾಗಿ ಅಪಾರ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಪ್ಯಾನ್ ಇಂಡಿಯಾ ʼ45ʼ ಚಿತ್ರ (45 Movie)‌ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಯುಗಾದಿ ಹಬ್ಬದಂದು ಈ ಚಿತ್ರದ ಟೀಸರ್ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಯಾಗಿತ್ತು. ಈ ಅದ್ಭುತ ಟೀಸರ್‌ಗೆ ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾಷೆಗಳ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಟೀಸರ್‌ನಲ್ಲೇ ಮೋಡಿ ಮಾಡಿರುವ ಈ ಚಿತ್ರ ಆಗಸ್ಟ್ 15 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಟೀಸರ್‌ಗೆ ದೊರಕಿರುವ ಮೆಚ್ಚುಗೆಗೆ ಚಿತ್ರತಂಡ ಸಂತಸಗೊಂಡಿದೆ‌. ಹಾಗಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪ ರಮೇಶ್ ರೆಡ್ಡಿ ಅವರು ಏಪ್ರಿಲ್ 15 ಹಾಗೂ 16 ಪಕ್ಕದ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವ ಮೂಲಕ ಎಲ್ಲಾ ರಾಜ್ಯಗಳ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲಿದ್ದಾರೆ.

ಈ ಸುದ್ದಿಯನ್ನೂ ಓದಿ | Resortwear Fashion: ಸಮ್ಮರ್‌ನಲ್ಲಿ ರೆಸಾರ್ಟ್‌ವೇರ್‌ ಫ್ಯಾಷನ್‌ ಹಂಗಾಮ

ಚಿತ್ರ ಆರಂಭದಿಂದಲೂ ಯಾವುದೇ ಕೊರತೆ ಬಾರದ ಹಾಗೆ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಖಾಸಗಿ ವಿಮಾನದಲ್ಲಿ ಚಿತ್ರತಂಡದವರ ಜತೆಗೆ ಹೊರಡಲಿದ್ದಾರೆ. ಮೊದಲಿಗೆ ಏಪ್ರಿಲ್ 15 ರ ಮಂಗಳವಾರ ಬೆ.11 ಗಂಟೆಗೆ ಮುಂಬೈನ PVR juhu ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಚಿತ್ರತಂಡ ಅಂದು ಸಂಜೆ 7 ಗಂಟೆಗೆ ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ PVR RK ಸಿನಿಪ್ಲಕ್ಸ್ ನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ. ಮರುದಿನ ಏಪ್ರಿಲ್ 16 ಬುಧವಾರ ಬೆ.11 ಗಂಟೆಗೆ ಚೆನ್ನೈನ ಸತ್ಯಂ ಸಿನಿಮಾಸ್‌ನಲ್ಲಿ ಹಾಗೂ ಅಂದು ಸಂಜೆ 7 ಗಂಟೆಗೆ ಕೇರಳದ ಕೊಚ್ಚಿ PVR forum ನಲ್ಲಿ ʼ45ʼ ಚಿತ್ರದ ಪತ್ರಿಕಾಗೋಷ್ಠಿ ನಡೆಯಲಿದೆ.