Covid 19 Cases: ರಾಜ್ಯದಲ್ಲಿಂದು 53 ಮಂದಿಗೆ ಕರೋನಾ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 582ಕ್ಕೆ ಏರಿಕೆ
Covid 19 Cases: ರಾಜ್ಯದಲ್ಲಿ ಇಂದು ಒಟ್ಟು 675 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 53 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 324 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 319 ಮಂದಿ ಹೋಮ್ ಐಸೊಲೇಷನ್‌ನಲ್ಲಿದ್ದಾರೆ.


ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳಲ್ಲಿ (Covid 19 Cases) ಮತ್ತೆ ಏರಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 53 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 582ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಂಗಳವಾರ ಯಾವುದೇ ಸಾವು ವರದಿಯಾಗಿಲ್ಲ.
ರಾಜ್ಯದಲ್ಲಿ ಇಂದು ಒಟ್ಟು 675 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 53 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 324 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 319 ಮಂದಿ ಹೋಮ್ ಐಸೊಲೇಷನ್‌ನಲ್ಲಿದ್ದಾರೆ, ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Daily report of Covid 19 as on 03-06-2025
— Karnataka Health Department (@DHFWKA) June 3, 2025
ಕೋವಿಡ್ 19 - ದಿನದ ವರದಿ@CMofKarnataka @dineshgrao @KarnatakaVarthe pic.twitter.com/Dqi07NpLyH
ಇನ್ನು ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಸಚಿವರು ಈಗಾಗಲೇ ಮನವಿ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ | ಮಧ್ಯ ಪ್ರದೇಶದಲ್ಲಿ ನಿಗೂಢ ಪ್ರಾಣಿಯ ದಾಳಿಗೆ 6 ಮಂದಿ ಬಲಿ; ಭುಗಿಲೆದ್ದ ಸಾರ್ವಜನಿಕರ ಆಕ್ರೋಶ