ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಸಾವು; ಬೆಂಗಳೂರಿನ ಮಾದಪಟ್ಟಣದಲ್ಲಿ ದುರಂತ

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಗುರುವಾರ (ಜುಲೈ 2) ಬೆಳ್ಳಂಬೆಳಗ್ಗೆ ಘೋರ ದುರಂತ ಸಂಭವಿಸಿದ್ದು, ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, 4 ಮೃತದೇಹ ಹೊರ ತೆಗೆಯಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಜು. 2: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಗುರುವಾರ (ಜುಲೈ 2) ಬೆಳ್ಳಂಬೆಳಗ್ಗೆ ಘೋರ ದುರಂತ ಸಂಭವಿಸಿದ್ದು, ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, 4 ಮೃತದೇಹ ಹೊರ ತೆಗೆಯಲಾಗಿದೆ (Bengaluru News). ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್​​ನಲ್ಲಿ ನಡೆದಿದೆ. ಅಕ್ರಮ ಗಣಿಗಾರಿಕೆಗೆ ಮತ್ತೊಮ್ಮೆ ಅಮಾಯಕರ ಜೀವ ಬಲಿಯಾದಂತಾಗಿದೆ. ಮೃತರು ಬಿಹಾರ ಮತ್ತು ಅಸ್ಸಾಂ ಮೂಲದ ಕಾರ್ಮಿಕರು ಎನ್ನಲಾಗಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚಿಕ್ಕನಹಳ್ಳಿ (ಹುಲವೇನಹಳ್ಳಿ ಗ್ರಾಮ) ಬಳಿ ಈ ಘಟನೆ ನಡೆದಿದೆ. ಬಂಡೆ ಸಿಡಿದು ಕೆಳಗಿದ್ದವರ ಮೇಲೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರೇಯಸಿಯ ಜತೆ ಗಲಾಟೆ; ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ಹುಲವೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಈ ಕ್ವಾರೆಯನ್ನು ಅಧಿಕೃತ ಪರವಾನಗಿ ಇಲ್ಲದೆ ಅಕ್ರಮ ನಡೆಸಲಾಗುತ್ತಿತ್ತು ಎನ್ನಲಾಗಿದೆ. ದೊಡ್ಡ ಬಂಡೆಗಳನ್ನು ಪುಡಿ ಮಾಡಲು ಅತಿ ತೀವ್ರತೆಯ ಸ್ಫೋಟಕಗಳನ್ನು ಬಳಸಿದ್ದೇ ದುರಂತಕ್ಕೆ ಕಾರಣ ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಬಂಡೆಗಳ ಅವಶೇಷಗಳ ಅಡಿ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದ್ದು, ಹೊರ ತೆಗೆಯಲು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಘಟನೆ ವೇಳೆ ಒಟ್ಟು 15 ಮಂದಿ ಕಾರ್ಯ ನಿರ್ವಹಿಸುತ್ತಿದ್ದರು.

ಮಾಹಿತಿ ತಿಳಿಯುತ್ತಿದ್ಧಂತೆ ಪೊಲೀಸರು, ಅಧಿಕಾರಿಗಳಿ ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಉನ್ನತ ಮಟ್ಟದ ನಿಯೋಗ ರಚಿಸಲಿದೆ.

ಘಟನೆ ವೇಳೆ ಕ್ರಷರ್‌ನಲ್ಲಿ 10-15 ಜನ ಅಸ್ಸಾಂ, ಬಿಹಾರದವರು, 2-3 ಸ್ಥಳೀಯರು ಕೆಲಸ ಮಾಡುತ್ತಿದ್ದರು. ಹಿಟಾಚಿಯಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 100 ಅಡಿ ಎತ್ತರದಿಂದ ಬಂಡೆ ಒಮ್ಮೆಲೆ ಕುಸಿದು ಬಿದ್ದಿತ್ತು.

ಕಾರಿನ ಮೇಲೆ ಬಿತ್ತು ಬೆಟ್ಟದಿಂದ ಉರುಳಿಬಂದ ಬಂಡೆ; ಸ್ಥಳದಲ್ಲೇ ಮಹಿಳೆ ಸಾವು

ಸಿಎಂ ಡಿಕೆಶಿ ಸಂತಾಪ

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೀವ್ರ ಸಂತಾಪ ಸೂಚಿಸಿದ್ದಾರೆ. ʼʼಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲಕರ ಕರ್ತವ್ಯ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆʼʼ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author