ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Monkey Disease: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಸಾಮಾನ್ಯವಾಗಿ ಈ ಸೋಂಕು (Kyasanur Forest Disease) ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಈ ಸೋಂಕು ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಪ್ರದೇಶಗಳ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ.

ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ -

ಹರೀಶ್‌ ಕೇರ
ಹರೀಶ್‌ ಕೇರ Dec 16, 2025 10:25 AM

ಶಿವಮೊಗ್ಗ, ಡಿ. 15: ಮಲೆನಾಡಿನಲ್ಲಿ ಈ ಬಾರಿ ಈ ಮಂಗನ ಕಾಯಿಲೆ (Monkeypox virus) ಅಥವಾ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ (Kyasanur Forest Disease, KFD) ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಆತಂಕ ಮೂಡಿಸಿದೆ. ಈ ಬಾರಿ ಅವಧಿಗೂ ಮುನ್ನವೇ ಕೆಎಫ್‌ಡಿ ಕೇಸ್​​​ಗಳ (Monkey fever) ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಶಿವಮೊಗ್ಗ (Shimogga) ಜಿಲ್ಲೆಯ ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.

ಸಾಮಾನ್ಯವಾಗಿ ಈ ಸೋಂಕು ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಈ ಸೋಂಕು ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಪ್ರದೇಶಗಳ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಳೂಡಿ-ಸೋನಲೆ ಗ್ರಾಮದಲ್ಲಿ ಕಳೆದ ವಾರ 55 ವರ್ಷದ ಮಹಿಳೆಗೆ ಕಾಣಿಸಿಕೊಂಡಿತ್ತು. ಆರೋಗ್ಯ ಇಲಾಖೆ ಅದೇ ಊರಿನ ಮತ್ತಷ್ಟು ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದೀಗ 7 ಜನರಿಗೆ ಪಾಸಿಟಿವ್ ಬಂದಿದೆ. ಇಲ್ಲಿಯವರೆಗೆ ಒಟ್ಟು 8 ಜನರಲ್ಲಿ ಕೆ.ಎಫ್.ಡಿ. ಸೋಂಕು ಕಾಣಿಸಿಕೊಂಡಿದೆ. ಈ ಎಂಟು ಜನರಲ್ಲಿ ಒಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ. ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಯಲ್ಲಿ ಆರು ಜನರು ಕೆಎಫ್​​ಡಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಇಲಾಖೆ ಹೆಚ್ಚಿನ ನಿಗಾ

ಬಿಳ್ಳೋಡಿ ಗ್ರಾಮದಲ್ಲಿ ಪಾಸಿಟಿವ್ ಬಂದಿರುವ 8 ಜನರಲ್ಲಿ ಮೂವರು ಪುರುಷರಿದ್ದು, ಐವರು ಮಹಿಳೆಯರು. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ. ಜನವರಿ ಆರಂಭದಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿದ್ದವು. ಈ ಬಾರಿ ನವೆಂಬರ್‌ನಿಂದಲೇ ಸರ್ವೇಕ್ಷಣೆ ಆರಂಭಿಸಿರುವುದರಿಂದ ಆರೋಗ್ಯ ಇಲಾಖೆ ನಿರೀಕ್ಷೆಗೂ ಮೀರಿ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಮಂಗನ ಕಾಯಿಲೆಗೆ ಲಸಿಕೆ ನಿಲ್ಲಿಸಿ ಮೂರು ವರ್ಷ ಕಳೆದಿದೆ. ಸದ್ಯ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ.

ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

ಕುಗ್ರಾಮಗಳಲ್ಲಿ ಕೂಡ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಅಲ್ಲಿನ ಗ್ರಾಮಸ್ಥರಿಗೆ ಮಂಗನ ಕಾಯಿಲೆ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ಕಾಡಂಚಿನ ಪ್ರದೇಶಗಳಲ್ಲಿ ದುಡಿಮೆಗಾಗಿ ತೆರಳುವ ಗ್ರಾಮಸ್ಥರು ಕಡ್ಡಾಯವಾಗಿ ಡಂಪ್ ಎಣ್ಣೆ ಮೈಯಿಗೆ ಲೇಪಿಸಿಕೊಳ್ಳುವ ಮೂಲಕ, ಉಣ್ಣೆಗಳಿಂದ ರಕ್ಷಣೆ ಪಡೆಯುವಂತೆ ಸೂಚಿಸಿದ್ದಾರೆ. ಒಂದು ಬಾರಿ ಈ ಎಣ್ಣೆ ಮೈಗೆ ಹಾಕಿಕೊಂಡರೆ ಉಣ್ಣೆಯಿಂದ ನಾಲ್ಕು ಘಂಟೆ ರಕ್ಷಣೆ ಪಡೆಯಬಹುದು.

ಗ್ರಾಮಗಳಲ್ಲಿ ಬ್ಯಾನರ್​ಗಳ ಮೂಲಕವೂ ಎಚ್ಚರಿಕೆ ನೀಡುತ್ತಿದ್ದಾರೆ. ಪಾಸಿಟಿವ್ ಬಂದಿರುವ ಜಾಗದ ಅರಣ್ಯ ಪ್ರದೇಶ, ಗದ್ದೆ ತೋಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಓಡಾಟ ಕಡಿಮೆ ಮಾಡಬೇಕು. ಬೇಸಿಗೆ ಮುಗಿಯುವರೆಗೆ ಗ್ರಾಮಸ್ಥರು ಸಾಕಷ್ಟು ಮುಂಜಾಗ್ರತೆಯನ್ನು ತೆಗೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮತ್ತು ಜಾಗೃತಿ ಮೂಡಿಸುತ್ತಿದ್ದಾರೆ.