Mahesh Shetty Thimarodi: ಮಹೇಶ್ ತಿಮರೋಡಿಗೆ ಬಿಗ್ ಶಾಕ್; ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಎಸಿ ಆದೇಶ
Mahesh Shetty Thimarodi: ಧರ್ಮಸ್ಥಳ ಬುರುಡೆ ಪ್ರಕರಣ, ಶವ ಹೂತಿಟ್ಟ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನಿಗೆ ಮಹೇಶ್ ತಿಮರೋಡಿ ಆಶ್ರಯ ನೀಡಿದ್ದರು. ಅಲ್ಲದೇ ಅವರ ವಿರುದ್ಧ 32 ಕೇಸ್‌ಗಳು ದಾಖಲಾಗಿದ್ದವು. ಹೀಗಾಗಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ.

-

ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ತಿಮರೋಡಿ (Mahesh Shetty Thimarodi) ಅವರನ್ನು ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದಾರೆ. ತಿಮರೋಡಿ ಮೇಲೆ 32 ಕೇಸ್ ದಾಖಲಾಗಿದ್ದವು. ಹೀಗಾಗಿ ಅವರನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ.
ಬುರುಡೆ ಪ್ರಕರಣ, ಶವ ಹೂತಿಟ್ಟ ಪ್ರಕರಣದಲ್ಲಿ ಚಿನ್ನಯ್ಯನಿಗೆ ತಿಮರೋಡಿ ಆಶ್ರಯ ನೀಡಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಗಡಿಪಾರು ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಅಧಿಕಾರ ತಿಮರೋಡಿಗೆ ಇರಲಿದೆ. ಸದ್ಯ ತಿಮರೋಡಿ ಬೆಳ್ತಂಗಡಿಯಲ್ಲೇ ಇದ್ದು, ಗಡಿಪಾರು ಆದೇಶ ತಲುಪಿದ ಕೂಡಲೇ ಜಿಲ್ಲೆಯನ್ನು ತೊರೆಯಲಿದ್ದಾರೆ.
ಒಬ್ಬ ವ್ಯಕ್ತಿ ಮೇಲೆ ಅನೇಕ ಕ್ರಿಮಿನಲ್ ಪ್ರಕರಣಗಳಿದ್ದು, ಆತ ಮತ್ತೆ ಮತ್ತೆ ಕಾನೂನುಬಾಹಿರ ಕೃತ್ಯ ಎಸಗಲು ಪ್ರಯತ್ನಿಸಿದಾಗ ಅಂತಹ ವ್ಯಕ್ತಿಯನ್ನು ಗಡಿಪಾರು ಮಾಡಲಾಗುತ್ತದೆ. ಸಾಮಾನ್ಯವಾಗಿ ಯಾವುದೇ ವ್ಯಕ್ತಿಯನ್ನು ಗಡಿಪಾರು ಮಾಡುವ ಮೊದಲು ನೋಟಿಸ್ ನೀಡಲಾಗುತ್ತದೆ. ನೋಟಿಸ್‌ಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಆ ವ್ಯಕ್ತಿಯನ್ನು ಗಡಿಪಾರು ಮಾಡಲಾಗುತ್ತದೆ. ಗಡಿಪಾರು ಆದೇಶವನ್ನು ಉಲ್ಲಂಘಿಸಿದರೆ ತಿಮರೋಡಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸುವ ಅಧಿಕಾರ ಹೊಂದಿರುತ್ತಾರೆ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಶಸ್ತ್ರಾಸ್ತ್ರ ಕಾಯಿದೆ ಅಡಿ ಎಫ್‌ಐಆರ್