ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌; 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ ಎಂದ ಲಕ್ಷ್ಮಿ ಹೆಬ್ಬಾಳ್ಕರ್‌

Laxmi Hebbalkar: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು, ಮಾ. 11: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ (Anganwadi Vacancies) ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Laxmi Hebbalkar) ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯತ್‌ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವೆ ಮಾಹಿತಿ ಮಾಡಿದರು.

ಬೆಂಗಳೂರಿನ ಮತದಾರರ ಪಟ್ಟಿ ಪ್ರಕಟ: ಆಕ್ಷೇಪ ಸಲ್ಲಿಕೆಗೆ ಮಾ. 16ರವರೆಗೆ ಅವಕಾಶ

ಇನ್ನು ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗು 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.