ನಟ ದರ್ಶನ್‌ಗೆ ಮತ್ತೊಮ್ಮೆ ಹಿನ್ನಡೆ; 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿದ ಕೋರ್ಟ್
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶ ಹೊರಡಿಸಿದೆ.
ನಟ ದರ್ಶನ್ (ಸಂಗ್ರಹ ಚಿತ್ರ). -
ಬೆಂಗಳೂರು, ಡಿ. 3: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case)ದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ (Actor Darshan) ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ (Income Tax) ಇರಲಿ ಎಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶ ಹೊರಡಿಸಿದೆ. ಆ ಮೂಲಕ ದರ್ಶನ್‌ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ವಶಕ್ಕೆ ಪಡೆದ ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಿದ್ದರು. ತನಿಖೆ ನಡೆಸಿದ ಐಟಿ ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿರಲಿಲ್ಲ. ಈ ಸಂದರ್ಭದಲ್ಲಿ ದರ್ಶನ್ 82 ಲಕ್ಷ ರೂ. ಹಣ ವಾಪಸ್ ನೀಡಲು ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಇದೀಗ ಕೋರ್ಟ್ ಹನ ಮರಳಿಸಲು ನಿರಾಕರಿಸಿದೆ.
ಇದೀಗ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ 82 ಲಕ್ಷ ರೂ. ಐಟಿ ಬಳಿಯಲ್ಲೇ ಇರಲಿ, ತನಿಖೆ ಮುಂದುವರಿಯಲಿ ಎಂದು ಆದೇಶ ನೀಡಿದೆ. ಈ ಹಣ ಹೇಗೆ ಬಂತು ಎನ್ನುವುದನ್ನು ದರ್ಶನ್ ಪರ ವಕೀಲರು ವಾದಿಸಿದರೂ ಪ್ರಯೋಜನವಾಗಿಲ್ಲ.
ವಕೀಲರ ವಾದವೇನು?
ಮೋಹನ್ ರಾಜ್‌ಗೆ ಈ ಹಿಂದೆ ದರ್ಶನ್ ಸಾಲವಾಗಿ ಹಣ ನೀಡಿದ್ದರು. ಮೋಹನ್ ರಾಜ್ ಮರಳಿಸಿದ ಹಣವನ್ನು ದರ್ಶನ್ ಮನೆಯಲ್ಲಿಟ್ಟಿದ್ದರು ಎಂದು ವಕೀಲರು ವಾದಿಸಿದ್ದಾರೆ. ಇದಕ್ಕೆ ಆದಾಯ ತೆರಿಗೆ ಇಲಾಖೆಯು ದರ್ಶನ್ ಈ ಹಣಕ್ಕೆ ಸೂಕ್ತ ದಾಖಲೆಯನ್ನು ಸಲ್ಲಿಸಿಲ್ಲ ಎಂದು ಹೇಳಿದೆ. ಸದ್ಯ ಈ ಪ್ರಕರಣದಲ್ಲಿ ತನಿಖೆ ಮುಂದುವರಿಯಲಿದೆ.
ದರ್ಶನ್ 'ಡೆವಿಲ್' ಚಿತ್ರದ ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್!
ಆಗಸ್ಟ್ 14ರಂದು ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಇತರ ಆರೋಪಿಗಳು ಆಗಸ್ಟ್ 14ರಂದು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಮತ್ತು ಎ 2 ಆರೋಪಿ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ 2024ರ ಡಿಸೆಂಬರ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದರ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ಎಲ್ಲ ಆರೋಪಿಗಳ ಜಾಮೀನು ರದ್ದುಗೊಳಿಸಿತ್ತು.
ʼದಿ ಡೆವಿಲ್ʼ ರಿಲೀಸ್‌ಗೆ ದಿನಗಣನೆ
ಈ ಮಧ್ಯೆ ದರ್ಶನ್ ಅನುಪಸ್ಥಿತಿಯಲ್ಲಿ ಅವರು ಕೊನೆಯ ಬಾರಿ ನಟಿಸಿರುವ, ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಪ್ರಕಾಶ್ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 11ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ದರ್ಶನ್‌ಗೆ ಜೋಡಿಯಾಗಿ ಮೊದಲ ಬಾರಿ ರಚನಾ ರೈ ಕಾಣಿಸಿಕೊಂಡಿದ್ದು, ಈಗಾಗಲೇ ಹೊರಬಿದ್ದಿರುವ ಚಿತ್ರದ ಹಾಡುಗಳು ಗಮನ ಸೆಳೆದಿವೆ. ಡಿಸೆಂಬರ್ 5ರಂದು ಬೆಳಗ್ಗೆ 10:05ಕ್ಕೆ ‘ದಿ ಡೆವಿಲ್ʼ ಸಿನಿಮಾದ ಟ್ರೈಲರ್ ಹೊರ ಬೀಳಲಿದೆ.