Kamal Haasan Controversy: ತಮಿಳಿನಿಂದ ಕನ್ನಡ ಬಂದಿದ್ರೆ ಸರಿ.... ಅದ್ರಲ್ಲಿ ಅವಮಾನ ಏನು? ಕಮಲ್ ಹಾಸನ್ ಪರ ನಟ ಕಿಶೋರ್ ಬ್ಯಾಟಿಂಗ್
Actor Kishore on Kamal haasan:ಮೈಸೂರಿನಲ್ಲಿ ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಪತ್ರಕರ್ತರ ಪ್ರಶ್ನಗೆ ಪ್ರತಿಕ್ರಿಯಿಸಿದ ಕಿಶೋರ್, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ತುಂಬಾ ತಿಳಿದಂತಹ ಮನುಷ್ಯ ಏನೂ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಅದನ್ನು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು.ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ ಎಂದರು.


ಮೈಸೂರು: ಕನ್ನಡದ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆಣಕಿರುವ ಬಹುಭಾಷಾ ನಟ ಕಮಲ್ ಹಾಸನ್(Kamal haasan) ಪರ ಇದೀಗ ನಟ ಕಿಶೋರ್(Actor Kishore) ಬ್ಯಾಟಿಂಗ್ ನಡೆಸಿದ್ದಾರೆ. ಕಮಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕಿಶೋರ್, ಅವರ ಹೇಳಿಕೆಯನ್ನು ಅವಹೇಳನಕಾರಿ ಎಂದು ಏಕೆ ಭಾವಿಸಬೇಕು ಎಂದು ಪ್ರಶ್ನಿಸಿದ್ದಾರೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಮಲ್ ಪರ ಧ್ವನಿ ಎತ್ತಿರುವ ಹಿರಿಯ ನಟ ಶಿವರಾಜ್ ಕುಮಾರ್ ವಿರುದ್ಧ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಕಿಶೋರ್ ಹೇಳಿಕೆ ಎಲ್ಲರ ಕೆಂಗ ಣ್ಣಿಗೆ ಗುರಿಯಾಗುವಂತೆ ಮಾಡಿದೆ.
ಕಿಶೋರ್ ಹೇಳಿದ್ದೇನು?
ಮೈಸೂರಿನಲ್ಲಿ ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಪತ್ರಕರ್ತರ ಪ್ರಶ್ನಗೆ ಪ್ರತಿಕ್ರಿಯಿಸಿದ ಕಿಶೋರ್, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ತುಂಬಾ ತಿಳಿದಂತಹ ಮನುಷ್ಯ ಏನೂ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಅದನ್ನು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು.ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ ಎಂದರು.
ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತದೆ. ಹಾಗಂತ ಒಂದು ಭಾಷೆ ಮೇಲೂ- ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ ಹಾಗೆ ತಮಿಳು ಸಹ ಎಲ್ಲಿಂದಲೂ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನ ರೊಚ್ಚಿಗೆಬ್ಬಿಸಬಾರದು. ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನು ಬಂಡವಾಳ ಮಾಡಿಕೊಂಡು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನ ಭಾಷೆಯಾಗಿ ನೋಡಿ. ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ ಏನು ಅಂತ ಕೇಳಿ ಅದನ್ನ ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ ಎಂದು ಸಮರ್ಥಿಸಿಕೊಂಡರು.
ಕಿಶೋರ್ ವಿಡಿಯೊ ಇಲ್ಲಿದೆ
ಈ ಸುದ್ದಿಯನ್ನೂ ಓದಿ: Kamal Hassan controversy: ಕಮಲ್ ಹಾಸನ್ ಕ್ಷಮೆ ಕೇಳುವವರೆಗೂ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ
ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಭಾಷೆಗಳ ಬಗ್ಗೆ ಬಹಳಷ್ಟು ತರ್ಕಗಳಿವೆ. ಒಂದೊಂದು ಭಾಷೆಯು ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಲೇ ಇವೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು.? ಕಮಲ್ ಹಾಸನ್ ಹೇಳಿರೋದು ಸಹ ಒಂದು ಥಿಯರಿ ಇರಬಹುದು. ಅವರ ಥಿಯರಿ ಏನು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದರು.