ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Raju Talikote: ಇಂದು ಚಿಕ್ಕಸಿಂದಗಿಯಲ್ಲಿ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ

Vijayapura: `ಕಲಿಯುಗದ ಕುಡುಕ' ನಾಟಕ ಮುಖಾಂತರ ತುಂಬಾ ಪ್ರಸಿದ್ಧಿ ಪಡೆದ ರಾಜು ತಾಳಿಕೋಟೆ ನಿರ್ದೇಶಕ ಆನಂದ್ ಪಿ ರಾಜು ಅವರ `ಹೆಂಡ್ತಿ ಅಂದ್ರೆ ಹೆಂಡ್ತಿ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿರಂಗಕ್ಕೂ ಬಂದರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಇವರು ಜನಪ್ರಿಯತೆ ಗಳಿಸಿದರು.

ಮಂಗಳೂರು : ಖ್ಯಾತ ಪೋಷಕ ನಟ, ಹಾಸ್ಯ ನಟ ರಾಜು ತಾಳಿಕೋಟೆ (Actor Raju Talikote death) ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಹುಟ್ಟೂರಿನಲ್ಲಿ ನಡೆಯಲಿದೆ. ವಿಜಯಪುರ (Vjayapura) ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ತೋಟದಲ್ಲಿ ಇಂದು ಅಂತ್ಯಕ್ರಿಯೆಗೆ ನಿರ್ಧಾರ ಮಾಡಲಾಗಿದೆ. ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.

ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ. ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದು, ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ಅವರು ರಂಜಿಸುತ್ತಿದ್ದರು.

ಇವರು ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಮುಖ್ಯವಾಗಿ ಕುಡುಕರ ಜೀವನದ ಆಟೋಟೋಪಗಳನ್ನು ಹಾಸ್ಯಮಯವಾಗಿ ಚಿತ್ರಸಿದ `ಕಲಿಯುಗದ ಕುಡುಕ' ನಾಟಕ ಮುಖಾಂತರ ತುಂಬಾ ಪ್ರಸಿದ್ಧಿ ಪಡೆದರು. ನಿರ್ದೇಶಕ ಆನಂದ್ ಪಿ ರಾಜು ಅವರ `ಹೆಂಡ್ತಿ ಅಂದ್ರೆ ಹೆಂಡ್ತಿ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿರಂಗಕ್ಕೂ ಬಂದರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಇವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಇದನ್ನೂ ಓದಿ: Actor Raju Talikote: ಲಾರಿ ಕ್ಲೀನರ್‌ ಆಗಿದ್ದ ರಾಜು ತಾಳಿಕೋಟಿ ರಂಗಭೂಮಿ ಸೇರಿದ್ದು ಹೇಗೆ?

ಹರೀಶ್‌ ಕೇರ

View all posts by this author