ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಲಾವಿದರು, ರಾಜಕಾರಣಿಗಳು; ಪರಪ್ಪನ ಅಗ್ರಹಾರ ಜೈಲು ಈ ಸೆಲೆಬ್ರಿಟಿಗಳ ಅಡ್ಡ!

Parappana Agrahara Central Prison: ಧಾರಾವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈಗಾಗಲೇ ಇಲ್ಲಿ ದರ್ಶನ್‌, ಪವಿತ್ರಾ ಗೌಡ, ಪ್ರಜ್ವಲ್‌ ರೇವಣ್ಣ ಇದ್ದಾರೆ. ಆ ಮೂಲಕ ಜೈಲು ಸೆಲೆಬ್ರಿಟಿಗಳ ಅಡ್ಡ ಎನಿಸಿಕೊಂಡಿದೆ.

ದರ್ಶನ್‌ ಮತ್ತು ಪ್ರಜ್ವಲ್‌ ರೇವಣ್ಣ (ಸಂಗ್ರಹ ಚಿತ್ರ)

ಬೆಂಗಳೂರು, ಏ. 15: 10 ವರ್ಷಗಳ ಹಿಂದಿನ, ಧಾರಾವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು (Parappana Agrahara Central Prison) ಸೇರಿದ್ದಾರೆ. ಗುರುವಾರ (ಏಪ್ರಿಲ್‌ 16) ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದ್ದು, ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರಾ ಎನ್ನುವ ಅನುಮಾನ ಕಾಡತೊಡಗಿದೆ. ಈ ಮಧ್ಯೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆಲೆಬ್ರಿಟಿಗಳ ದಂಡೇ ನೆರೆದಿದೆ. ಸದ್ಯ ಈ ಅಂಶ ಗಮನ ಸೆಳೆದಿದೆ.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌, ಪವಿತ್ರಾ ಗೌಡ, ಲೈಂಗಿಕ ದೌರ್ಜನ್ಯದ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೊಲೆ ಪ್ರಕರಣದ ಆರೋಪಿ ವಿನಯ್‌ ಕುಲಕರ್ಣಿ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆ ಮೂಲಕ ಜೈಲು ಸೆಲೆಬ್ರಿಟಿಗಳ ಅಡ್ಡ ಎನಿಸಿಕೊಂಡಿದೆ.

ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ದೋಷಿ; ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ದರ್ಶನ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಎ 2 ಆರೋಪಿ ಸ್ಯಾಂಡಲ್‌ವುಡ್‌ ಸ್ಟಾರ್‌ ದರ್ಶನ್‌ ಕೆಲವು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. 2024ರ ಡಿಸೆಂಬರ್‌ನಲ್ಲಿ ಹೈಕೋರ್ಟ್‌ ಇವರಿಗೆ ಜಾಮೀನು ನೀಡಿತ್ತು. ಇದರ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ 2025ರ ಆಗಸ್ಟ್‌ 14ರಂದು ಎಲ್ಲ ಆರೋಪಿಗಳ ಜಾಮೀನು ರದ್ದುಗೊಳಿಸಿತ್ತು. ಹೀಗಾಗಿ ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ಮತ್ತೆ ಅರೆಸ್ಟ್‌ ಮಾಡಲಾಗಿತ್ತು.

ಪವಿತ್ರಾ ಗೌಡ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಎ 1 ಆರೋಪಿ, ದರ್ಶನ್‌ ಗೆಳತಿ ಪವಿತ್ರಾ ಗೌಡ ಕೂಡ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಇತ್ತೀಚೆಗೆ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಳ್ಳಿ ಹಾಕಿತ್ತು.

ಪ್ರಜ್ವಲ್‌ ರೇವಣ್ಣ

ಜೆಡಿಎಸ್ ಮಾಜಿ ಸಂಸದ, ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಜೈಲುವಾಸ ಸದ್ಯ ಮುಂದುವರಿದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸಿದ್ದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಪಾಲಾದ ವಿನಯ್‌ ಕುಲಕರ್ಣಿ ಶಾಸಕ ಸ್ಥಾನವನ್ನೂ ಕಳೆದುಕೊಳ್ತಾರಾ?

ವಿನಯ್‌ ಕುಲಕರ್ಣಿ

ಇದೀಗ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ನಿ ಕೂಡ ಪರಪ್ಪನ ಅಗ್ರಹಾರ ಜೈಲಿನ ಅತಿಥಿಯಾಗಿದ್ದಾರೆ. 2016ರ ಜೂನ್‌ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕ ಯೋಗೇಶ್‌ ಗೌಡ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ 2020ರ ನವೆಂಬರ್‌ 5ರಂದು ವಿನಯ್‌ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. 2021ರ ಆಗಸ್ಟ್‌ 11ರಂದು ಸುಪ್ರೀಂ ಕೋರ್ಟ್‌ ವಿನಯ್‌ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. 2025ರ ಜೂನ್‌ 7ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಯುತ್ತಿರುವಾಗ ವಿನಯ್‌ ಕುಲಕರ್ಣಿ ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದಕ್ಕೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಹೇಳಿ ಜಾಮೀನು ರದ್ದುಗೊಳಿಸಿತ್ತು.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author