Actress Ranya Rao: ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್; ಡಿವೋರ್ಸ್ ಕೊಡಲು ಮುಂದಾದ ಪತಿ!
Actress Ranya Rao: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದ ಬಳಿಕ ಬೇಸತ್ತ ಪತಿ ಜತಿನ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯದಲ್ಲೇ ಅವರು ನ್ಯಾಯಾಲಯಕ್ಕೆ ತಮ್ಮ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.


ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ಮದುವೆಯಾಗಿ ಒಂದೇ ತಿಂಗಳಲ್ಲಿ ದಂಪತಿ ನಡುವೆ ಭಿನ್ನಾಭಿಪ್ರಾಯಗಳಾಗಿತ್ತು. ಹೀಗಾಗಿ ಪತಿ-ಪತ್ನಿ ದೂರವಾಗಿಯೇ ಇದ್ದರು ಎನ್ನಲಾಗಿದೆ. ಇದೀಗ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಪತಿ ಜತಿನ್ ಹುಕ್ಕೇರಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ನವೆಂಬರ್ 27 ರಂದು ರನ್ಯಾ ಮತ್ತು ಜತಿನ್ ಮದುವೆಯಾಗಿದ್ದರು. ಇತ್ತೀಚೆಗೆ ರನ್ಯಾ ದುಬೈನಿಂದ ಚಿನ್ನ ಅಕ್ರಮ ಸಾಗಾಣಿಕೆ ಮಾಡುವಾಗ ಸಿಕ್ಕಿಬಿದ್ದಿದ್ದರು. ಇದೀಗ ರನ್ಯಾ ರಾವ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ನಡುವೆ ಅವರ ಪತಿ ಜತಿನ್ ರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಆದರೆ ಪ್ರಕರಣದಲ್ಲಿ ಜತಿನ್ ಪಾತ್ರವಿಲ್ಲ ಎಂದು ತಿಳಿದುಬಂದಿತ್ತು. ಈ ನಡುವೆ ತನ್ನನ್ನು ಬಂಧಿಸದಂತೆ ಜತಿನ್ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿದ್ದರು.
ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದ ಬಳಿಕ ಬೇಸತ್ತ ಪತಿ ಜತಿನ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯದಲ್ಲೇ ಅವರು ನ್ಯಾಯಾಲಯಕ್ಕೆ ತಮ್ಮ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಒಂದೇ ತಿಂಗಳಿಗೆ ಮದುವೆಯೂ ಆಗಿತ್ತು. ಈಗ ನಾಲ್ಕೇ ತಿಂಗಳಿಗೆ ವಿಚ್ಛೇದನ ಪಡೆಯುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Ranya Rao case: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ, ಕಾರಣ ಇಲ್ಲಿದೆ
ರಾಜ್ಯ ಸರ್ಕಾರಕ್ಕೆ 230 ಪುಟಗಳ ತನಿಖಾ ವರದಿ ಸಲ್ಲಿಕೆ
ನಟಿ ರನ್ಯಾ ರಾವ್ ಪ್ರಕರಣದ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಅಂಶಗಳು ಬೆಳಕಿಗೆ ಬರುತ್ತಿವೆ. ಪ್ರಕರಣದ ತನಿಖೆ ನಡೆಸಿರುವ ಗೌರವ್ ಗುಪ್ತ ನೇತೃತ್ವದ ಸಮಿತಿ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ 230 ಪುಟಗಳ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದರು. ಅದರಲ್ಲಿ ಏರ್‌ಪೋರ್ಟ್‌ನಲ್ಲಿ ರನ್ಯಾ ರಾವ್ ಅವರಿಗೆ ಸಿಗುತ್ತಿದ್ದ ಪ್ರೋಟೋಕಾಲ್ ಬಗ್ಗೆ ಉಲ್ಲೇಖಿಸಲಾಗಿತ್ತು. ರನ್ಯಾ ರಾವ್ ಹಲವು ಬಾರಿ ಪ್ರೋಟೋಕಾಲ್ ಪಡೆದಿರೋದು ಬೆಳಕಿಗೆ ಬಂದಿತ್ತು. ಇದಕ್ಕೆ ಅವರು ಹಲವು ಬಾರಿ ಸರ್ಕಾರಿ ಕಾರು, ಪೊಲೀಸ್ ವಾಹನವನ್ನೂ ಬಳಕೆ ಮಾಡಿದ್ದಾರೆ. ಈ ಮಾಹಿತಿ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಗೊತ್ತಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಕೆಯಾಗಿರುವ ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು.
ದುಬೈಗೆ ಹೋಗಿ ಬರುತ್ತಿದ್ದ ನಟಿ ರನ್ಯಾ ರಾವ್ ಅವರು ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ಬಳಕೆ ಮಾಡುತ್ತಿದ್ದರು. ಈ ವಿಚಾರ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಗೊತ್ತಿತ್ತು. ಆದರೆ ರಾಮಚಂದ್ರರಾವ್ ಅವರು ಮಗಳಿಗೆ ಪ್ರೋಟೋಕಾಲ್ ನೀಡಲು ಹೇಳಿರಲಿಲ್ಲ. ಅವರೇ ಹೇಳಿದ್ದಾರೆ ಅನ್ನೋದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಆದರೆ, ರನ್ಯಾ ರಾವ್ ಯಾವ ರೀತಿ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಅನ್ನೋ ಬಗ್ಗೆ ತನಿಖಾ ತಂಡ ಮಹತ್ವದ ಮಾಹಿತಿಯನ್ನು ಕಲೆ ಹಾಕಿತ್ತು.
ನಟಿ ರನ್ಯಾ ರಾವ್ ಕೇಸ್‌ನಲ್ಲಿ ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ಸಾಕ್ಷ್ಯ ಲಭ್ಯವಾದ ಮೇಲೆ ಈ ಕೇಸ್‌ನ ತನಿಖೆ ಮತ್ತಷ್ಟು ಚುರುಕಾಗಲಿದೆ. ರನ್ಯಾ ರಾವ್ ಜೊತೆಗೆ ಡಿಜಿಪಿ ರಾಮಚಂದ್ರರಾವ್ ಅವರಿಗೂ ಸಂಕಷ್ಟ ಎದುರಾಗಲಿದೆ.