ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

African swine flu: ರಾಜ್ಯಕ್ಕೆ ಕಾಲಿಟ್ಟ ಹಂದಿ ಜ್ವರ, 100 ಹಂದಿಗಳ ಸಾವು

ಕಳೆದ ಒಂದು ವಾರದಿಂದ ಫಾರ್ಮ್‌ನಲ್ಲಿ ಹಂದಿಗಳು ಸಾವನ್ನಪ್ಪಿದ್ದವು. ಹೀಗಾಗಿ ಸಾಕಾಣಿಕೆಯ ಫಾರ್ಮ್‌ ಹೌಸ್​ಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಹಂದಿಜ್ವರ ಶಂಕೆ ಹಿನ್ನಲೆ ಸ್ಯಾಂಪಲ್​​ ಅನ್ನು ಭೋಪಾಲ್‌ನ ರಾಷ್ಟ್ರೀಯ ಲ್ಯಾಬ್‌ಗೆ ಸ್ಯಾಂಪಲ್ ಕಳಿಸಲಾಗಿತ್ತು. ಬಂದಿರುವ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಹೆಬ್ಬರಿ ಗ್ರಾಮದ ಬಳಿಯಿರುವ ಫಾರ್ಮ್‌ ಒಂದರಲ್ಲಿ ಆಫ್ರಿಕನ್ ಹಂದಿ ಜ್ವರ (African swine flu) ಕಾಣಿಸಿಕೊಂಡಿದೆ. ಯಾರ್ಕ್‌ಶೈರ್ ತಳಿಯ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದ್ದು, ಈಗಾಗಲೇ 100 ಹಂದಿಗಳು ಸಾವನ್ನಪ್ಪಿವೆ. 57 ಹಂದಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ. ಆಫ್ರಿಕನ್ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕ ಬೇಡ ಎಂದು ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ ಮಾಹಿತಿ ನೀಡಿದ್ದಾರೆ.

ಕಳೆದ ಒಂದು ವಾರದಿಂದ ಫಾರ್ಮ್‌ನಲ್ಲಿ ಹಂದಿಗಳು ಸಾವನ್ನಪ್ಪಿದ್ದವು. ಹೀಗಾಗಿ ಸಾಕಾಣಿಕೆಯ ಫಾರ್ಮ್‌ ಹೌಸ್​ಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಹಂದಿಜ್ವರ ಶಂಕೆ ಹಿನ್ನಲೆ ಸ್ಯಾಂಪಲ್​​ ಅನ್ನು ಭೋಪಾಲ್‌ನ ರಾಷ್ಟ್ರೀಯ ಲ್ಯಾಬ್‌ಗೆ ಸ್ಯಾಂಪಲ್ ಕಳಿಸಲಾಗಿತ್ತು. ಇಂದು ಬಂದಿರುವ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಫಾರ್ಮ್‌ನಿಂದ ಹಂದಿಗಳ ಸಾಗಾಟ, ಮಾರಾಟ ನಿಷೇಧ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಂದಿಗಳನ್ನು ಹೊಸಕೋಟೆ ಮೂಲಕ ನಾಗಲ್ಯಾಂಡ್‌ಗೆ ರವಾನಿಸುತ್ತಿದ್ದರು. ಹಂದಿಗಳಿಗೆ ಆಫ್ರಿಕನ್ ಜ್ವರ ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಸೋಂಕಿತ ಹಂದಿಗಳಿಂದ ಮನುಷ್ಯರಿಗೆ ರೋಗ ಹರಡುವುದಿಲ್ಲ. ಹಾಗಾಗಿ ಆಫ್ರಿಕನ್ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕಬೇಡ ಎಂದು ಅವರು ಹೇಳಿದ್ದಾರೆ.

ಈ ಆಫ್ರಿಕನ್ ಹಂದಿ ಜ್ವರವು ಒಂದು ಸಾಂಕ್ರಾಮಿಕ ರೋಗ ಎನ್ನಲಾಗುತ್ತದೆ. ಇದು ದೇಶೀಯ ಮತ್ತು ಕಾಡು ಹಂದಿಗಳಿಂದ ಹರಡುತ್ತದೆ. ಈ ಕಾಯಿಲೆಗೆ ಒಳಗಾಗುವ ಹಂದಿಗಳು ಸಾವನ್ನಪ್ಪುತ್ತವೆ. ಇನ್ನು ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಅಥವಾ ಔಷಧಗಳು ಲಭ್ಯವಿಲ್ಲ. ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ. ಪ್ರದೇಶದ ಸುತ್ತಮುತ್ತಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ.

ಇದನ್ನೂ ಓದಿ: African Swine Fever: ಕೊಡಗಿನಲ್ಲಿ ಆಫ್ರಿಕನ್ ಹಂದಿಜ್ವರ, ನೂರಾರು ಹಂದಿಗಳ ಸಾವು

ಹರೀಶ್‌ ಕೇರ

View all posts by this author