ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಆಲ್ ದ ಬೆಸ್ಟ್; ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ: ಡಿಕೆ ಶಿವಕುಮಾರ್‌

ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ ಎಂದು ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಆಲ್ ದ ಬೆಸ್ಟ್, ಹೈಕಮಾಂಡ್ ಮಾತಿಗೆ ಬದ್ಧ: ಡಿಕೆಶಿ

ಡಿಕೆ ಶಿವಕುಮಾರ್ -

ಹರೀಶ್‌ ಕೇರ
ಹರೀಶ್‌ ಕೇರ Nov 21, 2025 5:49 PM

ಬೆಂಗಳೂರು, ನ. 21: ಮಾನ್ಯ ಮುಖ್ಯಮಂತ್ರಿಗಳು (chief minister) ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ. ರಾಜಧಾನಿಯ ಸದಾಶಿವನಗರ ನಿವಾಸದ ಬಳಿ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ನಿಲುವು ಇತ್ಯಾದಿಗಳ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

"ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಕೆಲವು ಶಾಸಕರು, ಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, "ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ" ಎಂದು ತಿಳಿಸಿದರು.

ಸಿಎಂಗೆ ಆಲ್ ದಿ ಬೆಸ್ಟ್

"ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ") ಎಂದರು.

ಯಾರೇ ಆದರೂ ಆಡಿದ ಮಾತು ಮುಖ್ಯ ಅಲ್ಲವೇ ಎಂದು ಕೇಳಿದಾಗ, "ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.

ಎರಡೂವರೆ ವರ್ಷಗಳಿಂದ ಡಿನ್ನರ್ ಮೀಟಿಂಗ್ ಆಗುತ್ತಲೇ ಇವೆ

ಸತೀಶ್ ಜಾರಕಿಹೊಳಿ ಅವರು ಡಿನ್ನರ್ ಸಭೆ ಮಾಡಿರುವ ಬಗ್ಗೆ ಕೇಳಿದಾಗ, "ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲ್ಕೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ" ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ, ʼಬೆಸ್ಟ್‌ ಆಫ್‌ ಲಕ್‌ʼ ಎಂದ ಡಿಕೆ ಶಿವಕುಮಾರ್