Karnataka Budget 2025: ಕಟ್ಟಡ ಕಾರ್ಮಿಕರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ತಮ್ಮ 16ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲ ಜಿಲ್ಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ 750 ಕೋಟಿ ರೂ. ಘೋಷಿಸಿದ್ದಾರೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಶುಕ್ರವಾರ (ಮಾ. 7) ಸುದೀರ್ಘ ಕಾಲಾವಧಿಯ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ (Karnataka Budget 2025). ಈ ವೇಳೆ ಅವರು ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲ ಜಿಲ್ಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ 750 ಕೋಟಿ ರೂ. ಘೋಷಿಸಿದ್ದಾರೆ. ಇದರ ಜತೆಗೆ ಕೌಶಲ್ಯಾಭಿವೃದ್ಧಿಗೆ ವಿವಿಧ ಯೋಜನೆ ಘೋಷಿಸಿದ್ದಾರೆ.
- ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, ನೀಡುವ Ex-gratia ಮೊತ್ತ 1.5 ಲಕ್ಷ ರೂ.ಗೆ ಹೆಚ್ಚಳ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರ ಮೊತ್ತ 8 ಲಕ್ಷ ರೂ.ಗೆ ಹೆಚ್ಚಳ.
- ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ.ಗಳ ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಕ್ರಮ.
- ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ.
ಕೌಶಲ್ಯಾಭಿವೃದ್ಧಿ
- ಯುವನಿಧಿ ಫಲಾನುಭವಿ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ
- ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು CMKKY-2.0 ಜಾರಿ.
- ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ CMKKY-2.0 ಯೋಜನೆಯಡಿ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರ ವಿದೇಶಿ ಭಾಷಾ ಕೌಶಲ್ಯ ತರಬೇತಿ.
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲು ಕ್ರಮ.
- ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ Industry-4.0ಗೆ ಅನುಗುಣವಾಗಿ ಹೊಸ ಪ್ರಯೋಗಾಲಯ ಸ್ಥಾಪನೆ.
- ʻನನ್ನ ವೃತ್ತಿ, ನನ್ನ ಆಯ್ಕೆʼ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ
- ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆ
- 2 ಸಾವಿರ ಅಭ್ಯರ್ಥಿಗಳಿಗೆ ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳ ಅಲ್ಪಾವಧಿ ತರಬೇತಿ ನೀಡಲು ಕ್ರಮ.
- ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸಲು ರಾಜ್ಯಮಟ್ಟದಲ್ಲಿ ʻಅಕ್ಕ ಕೋ-ಆಪರೇಟಿವ್ʼ ಸೊಸೈಟಿ ಸ್ಥಾಪನೆ.
- ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ ʻವಾತ್ಸಲ್ಯ ಕೇಂದ್ರʼಗಳ ಸ್ಥಾಪನೆ.
- ರಾಜ್ಯದ 10 ನಗರಗಳಲ್ಲಿ ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆ
- ಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಣೆಗೆ ಪಡೆಯುವ 1 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ. 8ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.
- 25 ಕೋಟಿ ರೂ. ವೆಚ್ಚದಲ್ಲಿ ಸೇಡಂ ಸರ್ಕಾರಿ ITI ಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಣ.
- ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲೂಕುಗಳಲ್ಲಿ ನೂತನ GTTC ಸ್ಥಾಪನೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
- ಗ್ರಾಮೀಣ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ ಪಡಿಸುವ 5200 ಕೋಟಿ ರೂ. ವೆಚ್ಚದ ಪ್ರಗತಿ ಪಥ ರಸ್ತೆ ಯೋಜನೆ ಪ್ರಸ್ತುತ ಸಾಲಿನಿಂದ ಅನುಷ್ಠಾನ.
- ಜಲ ಜೀವನ್ ಮಿಷನ್ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 6,050 ಕೋಟಿ ರೂ. ಅನುದಾನ.
- ʻಕಲ್ಯಾಣ ಪಥʼ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ಕಾಮಗಾರಿ ಶೀಘ್ರ ಪೂರ್ಣ.
- ಗ್ರಾಮ ಪಂಚಾಯತ್ ಮಟ್ಟದ ಅರಿವು ಕೇಂದ್ರಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಮರ್ಥ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ.
- ಗ್ರಾಮ ಪಂಚಾಯಿತ್‌ಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್‌ಗಳ ಸ್ಥಾಪನೆ.
- ಗ್ರಾಮ ಪಂಚಾಯತ್‌ಗಳಲ್ಲಿ ಇ-ಸ್ವತ್ತು ಅಭಿಯಾನ ಆರಂಭ. ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಣೆ. ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯತ್ ದತ್ತು ಕಾರ್ಯಕ್ರಮ ಆರಂಭ.
- ನೀರು ಸರಬರಾಜು ಮೂಲಭೂತ ಸೌಕರ್ಯ ನಿರ್ವಹಣೆಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶ ಅಭಿವೃದ್ಧಿ.
ಈ ಸುದ್ದಿಯನ್ನೂ ಓದಿ: Karnataka Budget 2025: ಸಿಎಂ ಸಿದ್ದರಾಮಯ್ಯ ಮಂಡಿಸಿದ 16ನೇ ಬಜೆಟ್‌ನ ಮುಖ್ಯಾಂಶಗಳು ಹೀಗಿವೆ
ಯೋಜನೆ
- ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ ಆಧರಿಸಿ ಸೂಕ್ತ ಕ್ರಮ.
- ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಯೋಜನೆ
- ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ 83 ಕೋಟಿ ರೂ. ಅನುದಾನ.
- ಯೋಜನಾ ಇಲಾಖೆಯ ವ್ಯಾಪ್ತಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರ.