ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Byrathi Basavaraj: ರೌಡಿ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಮಾಜಿ ಸಚಿವರು ಅಜ್ಞಾತ ಸ್ಥಳಕ್ಕೆ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

ರೌಡಿ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಸೆರೆ ಸಾಧ್ಯತೆ

ಬೈರತಿ ಬಸವರಾಜ್ -

ಹರೀಶ್‌ ಕೇರ
ಹರೀಶ್‌ ಕೇರ Dec 20, 2025 7:58 AM

ಬೆಂಗಳೂರು, ಡಿ.20: ರೌಡಿ ಶೀಟರ್ ಬಿಕ್ಲು ಶಿವನ ಹತ್ಯೆ ಕೇಸ್‌ನಲ್ಲಿ (rowdy sheeter Biklu Shiva murder case) ಮಾಜಿ ಸಚಿವ ಬೈರತಿ ಬಸವರಾಜ್‌ಗೆ (Byrathi Basavaraj) ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು (anticipatory bail) ಕೋರಿ ಮಾಜಿ ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ (High Court) ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಸದ್ಯ ಬೈರತಿ ಬಸವರಾಜ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಅವರ ನಿವಾಸದಲ್ಲೂ ಹಾಗೂ ಸದನದಲ್ಲೂ ಬೈರತಿ ಬಸವರಾಜ್ ಕಾಣಿಸಿಕೊಂಡಿಲ್ಲ.

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು. ನಿನ್ನೆ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಬಂಧನ ಮಾಡಲು ಸಿಐಡಿ ಟೀಂ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಹತ್ಯೆ ಹತ್ಯೆ ಪ್ರಕರಣ

2025 ಜುಲೈ 15ರ ರಾತ್ರಿ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. ಈತನ ನಿಜವಾದ ಹೆಸರು ಶಿವಪ್ರಕಾಶ್ ಅಥವಾ ಶಿವಕುಮಾರ್, ವಯಸ್ಸು ಸುಮಾರು 40-44. ಬೆಂಗಳೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ. ಆತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮಿನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು. ಹತ್ಯೆ ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು.

ರೌಡಿಶೀಟರ್‌ ಹತ್ಯೆ ಆರೋಪಿ ದುಬೈಗೆ ಪರಾರಿ, ಲುಕೌಟ್‌ ನೋಟೀಸ್‌ಗೆ ಸಿದ್ಧತೆ, ಇಂದು ಬೈರತಿ ವಿಚಾರಣೆ

ಇದರಲ್ಲಿ ಕೆಆರ್‌ ಪುರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು A5 ಆರೋಪಿಯಾಗಿ ಹೆಸರಿಸಲಾಗಿದೆ. ಬಿಕ್ಲು ಶಿವ ಹತ್ಯೆಗೆ ಪ್ರೇರಣೆ ನೀಡಿದ ಆರೋಪ ಬೈರತಿ ಬಸವರಾಜ್ ಮೇಲಿದೆ. ಈ ಕೇಸ್‌ನಲ್ಲಿ ಬೈರತಿ ಬಸವರಾಜ್ ಆಪ್ತ ಜಗದೀಶ್ ಅಲಿಯಾಸ್ ಜಗ್ಗ A1 ಆಗಿದ್ದರೆ ಕಿರಣ್ ಸೇರಿದಂತೆ ಹಲವರ ಹೆಸರು ಇದೆ. ಆರಂಭದಲ್ಲಿ ಭಾರತಿನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ನಂತರ ಜುಲೈ 24ರಂದು ಸಿಐಡಿಗೆ ಕೇಸ್‌ ವರ್ಗಾವಣೆಯಾಗಿತ್ತು. ಜುಲೈ-ಆಗಸ್ಟ್‌ವರೆಗೆ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಕಿರಣ್, ವಿಮಲ್, ಪ್ರದೀಪ್, ಮದನ್, ಸ್ಯಾಮ್ಯುವೆಲ್, ಅರುಣ್, ನವೀನ್, ನರಸಿಂಹ ಮುಂತಾದವರು ಆರೆಸ್ಟ್ ಆಗಿದ್ದಾರೆ.