ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Pratap Simha: ಸಿಎಂ ಕುರಿತು ಅವಹೇಳನ: ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲು

ಪ್ರತಾಪ್ ಸಿಂಹ ಅವರ ಹೇಳಿಕೆಯು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 4 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಪ್ರತಾಪ್‌ ಸಿಂಹ

ಬಾಗಲಕೋಟೆ, ಏ. 07: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಮಾತನಾಡಿದ ಆರೋಪದ ಮೇಲೆ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ದೂರು ದಾಖಲಾಗಿದೆ.

ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಐಹೊಳೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಪ್ರತಾಪ್ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಸಿದ್ದರಾಮಯ್ಯ ಅವರು ಯುಗಾದಿ ಮತ್ತು ದೀಪಾವಳಿ ಹಬ್ಬದ ದಿನ ಮಾಂಸ ತಿನ್ನುತ್ತೇನೆ ಎಂದು ಹೇಳುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ಮುಸ್ಲಿಮರ ಮತಗಳನ್ನು ಓಲೈಸಲು ಈ ರೀತಿ ಮಾತನಾಡುತ್ತಿದ್ದಾರೆ” ಎಂಬರ್ಥದ ಅವಹೇಳನಕಾರಿ ಸಾಲುಗಳನ್ನು ಬಳಸಿದ್ದರು ಎಂದು ವರದಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಿದ್ದಾರ್ಥ ಗೋಯಲ್, ಪ್ರತಾಪ್ ಸಿಂಹ ಅವರ ಈ ಹೇಳಿಕೆಯು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 4 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.

Pratap Simha: ನಾನು ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರತಾಪ್ ಸಿಂಹ ಪ್ರಕಟ

ಹರೀಶ್‌ ಕೇರ

View all posts by this author