ಬಾಗಲಕೋಟೆ, ಡಿ. 3: ರಸ್ತೆ ಬದಿ ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ (Road Accident). ಸಿದ್ದಾಪುರ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ಮೃತರನ್ನು ಸಿದ್ದಾಪುರ ಗ್ರಾಮದ ವಿಶ್ವನಾಥ್ (17), ಪ್ರವೀಣ್ (22), ಗಣೇಶ್ (20) ಮತ್ತು ಪ್ರಜ್ವಲ್ 17) ಎಂದು ಗುರುತಿಸಲಾಗಿದೆ (Bagalkot News). ಇವರೆಲ್ಲರೂ ವಿದ್ಯಾರ್ಥಿಗಳು.
ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಸುನೀಗಿದ್ದಾರೆ. ಮೃತರು ಸಿದ್ದಾಪುರದಿಂದ ಶಿರೋಳ ಗ್ರಾಮಕ್ಕೆ ಜಾತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿಜಯಪುರ-ಬೆಳಗಾವಿ ರಾಜ್ಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ಕಾಣಿಸಿದೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕೂಡಲೇ ಸ್ತಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಕೈ ಜೋಡಿಸಿದರು.
ಟ್ರ್ಯಾಕ್ಟರ್ ಚಾಲಕನದ್ದು ಯಾವುದೇ ತಪ್ಪಿಲ್ಲ ಎಂದು ಹೇಳಲಾಗುತ್ತಿದೆ. ಟ್ರ್ಯಾಕ್ಟರ್ ಹಿಂಭಾಗ ರಿಫ್ಲೆಕ್ಟರ್ ಕೂಡ ಅಳವಡಿಸಿಲಾಗಿತ್ತು. ಕಾರು ಚಾಲಕ ಹಾಗೂ ಇತರರು ಮದ್ಯಪಾನ ಮಾಡಿದ ಸಂಶಯ ಕೂಡ ವ್ಯಕ್ತವಾಗಿದೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜೇವರ್ಗಿ ಬಳಿ ಭೀಕರ ಕಾರು ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು
ಮಂತ್ರಾಲಯಕ್ಕೆ ತೆರಳುತ್ತಿದ್ದ ಕುಟುಂಬದ ಐವರು ಸಾವು
ರಾಯಚೂರು: ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿತ್ತು. ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದ ಈ ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು.
ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ ಹೊರಟಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದವು. ಭೀಕರ ಅಪಘಾತದಿಂದ ಫಾರ್ಚುನರ್ ಮತ್ತು ಸ್ವಿಫ್ಟ್ ಕಾರ್ ಸಂಪೂರ್ಣ ಜಖಂಗೊಂಡಿದ್ದವು.