ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ಬಾಗಲಕೋಟೆ, ಫೆ.21 : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalakote news) ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಟ್ರಾಕ್ಟರ್‌ನಲ್ಲಿ ಕಾರ್ಮಿಕರನ್ನು ಕೊಂಡೊಯ್ಯಲಾಗುತ್ತಿತ್ತು.

ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. 2 ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27), ರೇಖಾ ಭೋಕೆ ಮೃತ ದುರ್ದೈವಿಗಳು. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಚಿಕ್ಕೋಡಿ: ಲಾರಿ- ಬೈಕ್ ಮುಖಾಮುಖಿ (lorry bike hit) ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ (Road Accident) ಘಟನೆ ಬೆಳಗಾವಿ (Belagavi news) ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತ ದುರ್ದೈವಿಗಳು.

ಕಾನ್ಪುರ ಕ್ರಿಕೆಟ್ ಪಂದ್ಯ ನಡುವೆ ಜೇನುನೊಣ ದಾಳಿ; ಅಂಪೈರ್ ಸಾವು

ಮೃತ ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೀಶ್‌ ಕೇರ

View all posts by this author