ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bagalkot Bypoll 2026: ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಎಚ್.ವೈ. ಮೇಟಿ ಅವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Profile
Siddalinga Swamy Apr 4, 2026 6:56 PM

ಬಾಗಲಕೋಟೆ, ಏ.4: ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ (Bagalkot Bypoll 2026) ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ-ಸಂಸ್ಥೆಗಳ ಮುಖಂಡರ ಜತೆ ಸಭೆ ನಡೆಸಿ ಅವರು ಮಾತನಾಡಿದರು.

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಎಚ್.ವೈ. ಮೇಟಿ ಅವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಕೋರಿದರು.

ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.

ವಿಬಿಜಿ ರಾಮ್ ಜಿ ಕಾಯ್ದೆ ಉದ್ಯೋಗದ ಭರವಸೆ ನುಂಗಿದೆ

ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿಜಿ ರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದು ಟೀಕಿಸಿದರು.

ಬಾಗಲಕೋಟೆ ವೈದ್ಯಕೀಯ ಕಾಲೇಜು-ಎಚ್.ವೈ. ಮೇಟಿ ಕನಸು

ಎಚ್.ವೈ. ಮೇಟಿ ಅವರು 5 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದ ಜನಾನುರಾಗಿ ನಾಯಕರಾಗಿದ್ದರು, ಜಾತಿಬೇಧವಿಲ್ಲದೇ ಜನರ ಸೇವೆ ಸಲ್ಲಿಸಿದವರು. ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕಂಡಿದ್ದರು. ಅದರಂತೆ ಇಲ್ಲಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಲಾಗಿದೆ. ಆದ್ದರಿಂದ ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮಿಸಿದ ಎಚ್.ವೈ.ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಕೋರಿದರು.

ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿದೆ

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು. ಸ್ವಾತಂತ್ರ್ಯ ಲಭಿಸದೇ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ. ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ, ಅಪಪ್ರಚಾರ ಮಾಡಿಕೊಂಡು ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದು ಆರೋಪಿಸಿದರು.

ಬಿಜೆಪಿ ನುಡಿದಂತೆ ನಡೆದಿಲ್ಲ

ನರೇಂದ್ರ ಮೋದಿ ಅವರು 2014ರಲ್ಲಿ ಹೇಳಿದ್ದನ್ನು ಇಲ್ಲಿಯವರೆಗೂ ಜಾರಿ ಮಾಡಿಲ್ಲ. ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಬಡತನ ಹೋಗುತ್ತದೆ, ನಿರುದ್ಯೋಗ ಹೋಗಲಾಡಿಸಲಾಗುತ್ತದೆ, ರೈತರ ಆದಾಯ ದುಪ್ಪಟಾಗುತ್ತದೆ ಎಂದೆಲ್ಲಾ ಹೇಳಿದ್ದರು. ಒಳ್ಳೆ ದಿನಗಳು ಬರಲಿಲ್ಲ, ರೈತರ ಆದಾಯವೂ ಎರಡು ಪಟ್ಟು ಆಗಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿ ಮನೆಗೆ 15 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದರು, ಕೊಟ್ಟರೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ʼʼನಾನೇ ಅಭ್ಯರ್ಥಿ ಎಂದುಕೊಂಡು ಮತ ಹಾಕಿʼʼ; ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ

ದೇಶದಲ್ಲಿ ರೈತರಿಗೆ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ಮಲ ಹೊರುವ ಪದ್ದತಿ ನಿಷೇಧ, ಸಾಲ ಮನ್ನಾ ಮಾಡಿದ್ದು, ಕಾಂಗ್ರೆಸ್ ಸರ್ಕಾರ. ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ. ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.