ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bagalkot bypolls: ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸವಾಗುತ್ತಿದೆ: ವೀರಣ್ಣ ಚರಂತಿಮಠ

ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಶಿಕ್ಷಣ ಸಂಸ್ಥೆಗೆ ತೆರಳಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ. ಅವರನ್ನು ನವನಗರ ಪೊಲೀಸ್ ಠಾಣೆಗೆ ಕರೆದೊಯ್ದರೆ, ಅವರ ಮೇಲೆ ಕೇಸ್ ದಾಖಲು ಮಾಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳಿಗೆ ಬೆದರಿಕೆ: ವೀರಣ್ಣ ಚರಂತಿಮಠ ಆರೋಪ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ. -

Prabhakara R
Prabhakara R Apr 5, 2026 5:36 PM

ಬಾಗಲಕೋಟೆ: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಎನ್.ಎಸ್.ಯುಐ ಕಾರ್ಯಕರ್ತರು ಹಾಗೂ ಹಿಂದೂ ಅಲ್ಲದ ಯುವಕರನ್ನು ಕೇಸರಿ ಶಾಲು ಹಾಕಿಸಿ ಶಿಕ್ಷಣ ಸಂಸ್ಥೆಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ (Veeranna Charantimath) ಅವರು ಆರೋಪ ಮಾಡಿದ್ದಾರೆ.

ಉಪ ಚುನಾವಣೆ ರಣಕಣವಾಗಿ ಬದಲಾಗುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನಗರದ ವಿದ್ಯಾಗಿರಿ, ಜ್ಯೋತಿ ಕಾಲೋನಿ, ಬಿಟಿಡಿಎ ಭಾಗದಲ್ಲಿ ಮನೆ ಮನೆಗೆ ತೆರಳಿ, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ 23ರಿಂದ ಪ್ರಚಾರ ನಡೆಯುತ್ತಿದೆ, ಜನರು ಬಹಳ ಉತ್ಸಾಹದಿಂದ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಶಿಕ್ಷಣ ಸಂಸ್ಥೆಗೆ ತೆರಳಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ. ಅವರನ್ನು ನವನಗರ ಪೊಲೀಸ್ ಠಾಣೆಗೆ ಕರೆದೊಯ್ದರೆ, ಅವರ ಮೇಲೆ ಕೇಸ್ ದಾಖಲು ಮಾಡಲು ಮೀನಮೇಷ ಎಣಿಸುತ್ತಿದ್ದಾರೆ. ಎಲ್ಲ ರಾಜಕೀಯ ಪಕ್ಷದ ನಾಯಕರುಗಳ ಶಿಕ್ಷಣ ಸಂಸ್ಥೆಗಳಿವೆ. ಅಲ್ಲಿ ಯಾಕೆ ಆಗುವುದಿಲ್ಲ, ಇಲ್ಲಿ ಕಾಂಗ್ರೆಸ್‌ನಲ್ಲೇ ಕೆಲವು ನಾಯಕರ ಶಿಕ್ಷಣ ಸಂಸ್ಥೆಗಳು ಇವೆ ಎಂದರು.

ನಮ್ಮ ಕಾರ್ಯಕರ್ತರು ಹೋಗಿ ಪ್ರತಿಭಟನೆ ಮಾಡಿದಾಗ ಕೇಸ್ ದಾಖಲಿಸಿದ್ದಾರೆ. 6 ಜನರ ವಿರುದ್ಧ ಕೇಸ್ ದಾಖಲಾಗಿದೆ. ಸಿಎಂ ಅವರು ತಮ್ಮ ಅಭ್ಯರ್ಥಿ ಸೋಲುವ ಭಯಕ್ಕೆ ಇಲ್ಲಿ ಬಂದು, ಇಡೀ ಮಂತ್ರಿಮಂಡಲವನ್ನೇ ಇಲ್ಲಿಗೆ ಕರೆಯಿಸಿ, ಹಣ ಹಂಚುವ ಕಲಸ ಮಾಡುತ್ತದ್ದಾರೆ. ಇಂದು ನಮ್ಮ ನಾಯಕರಾದ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ ಪ್ರಚಾರಲ್ಕೆ ಆಗಮಿಸಲಿದ್ದಾರೆ. ನಮ್ಮ ಗೆಲುವು ನಿಶ್ವಿತ ಎಂದರು.

Bagalkot Bypoll 2026: ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.