ಬಾಗಲಕೋಟೆ: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬಾಗಲಕೋಟೆ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಮಹಿಳಾ ಘಟಕದ ಅಧ್ಯಕ್ಷರ ಆಯ್ಕೆ ಇಂದು ಬಾಗಲಕೋಟೆಯಲ್ಲಿ (Bagalkot News) ಜರುಗಿತು. ಸಮಾಜ ಸೇವೆ, ಯುವಜನರ ಪ್ರೋತ್ಸಾಹ ಹಾಗೂ ಸಂಘಟನೆ ಬಲಪಡಿಸುವ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ, ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಅಲಗೂರ, ವಿಜಯಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪವನ ಕುಲಕರ್ಣಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘವು ಕೇವಲ ಸಂಘಟನೆಯಷ್ಟೇ ಅಲ್ಲ; ಅದು ಸಮಾಜಮುಖಿ ಚಳವಳಿಯಾಗಿದೆ. ಯುವಕರಲ್ಲಿ ನಾಯಕತ್ವ ಬೆಳೆಯುವಂತೆ ಮಾಡುವುದೇ ನಮ್ಮ ಗುರಿ. ಸಂಘಟನೆಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಅಲಗೂರ ಮಾತನಾಡಿ, ಸಂಘದ ನವೀನ ಚಟುವಟಿಕೆಗಳಿಂದ ಸಮಾಜದಲ್ಲಿ ಒಗ್ಗಟ್ಟು ಹೆಚ್ಚಾಗುತ್ತಿದೆ. ಬಾಗಲಕೋಟೆ ಘಟಕದಿಂದ ರಾಜ್ಯ ಮಟ್ಟಕ್ಕೆ ಮಾದರಿ ಕಾರ್ಯ ನಿರ್ವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಸಭೆಯಲ್ಲಿ ನಾರಾಯಣ ದೇಸಾಯಿ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮಹಿಳಾ ಘಟಕದ ಹೊಸ ನೇತೃತ್ವ ಆಯ್ಕೆಯಾಯಿತು.
ಈ ಸುದ್ದಿಯನ್ನೂ ಓದಿ | Festive Season Saree Shopping 2025: ಗೌರಿ ಹಬ್ಬಕ್ಕೆ ಹೆಚ್ಚಾಯ್ತು ಸೀರೆ ಖರೀದಿ
ಆಯ್ಕೆಯಾದ ನೂತನ ಪದಾಧಿಕಾರಿಗಳು
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ ದೇಶಪಾಂಡೆ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮೋಹಿನಿ ಗಾಂವಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಮನಗೂಳಿ ಆಯ್ಕೆಯಾದರು.