Road Accident: ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು
Bagalkot accident: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ. ಕಾರು ಓವರ್ ಟೇಕ್ ಮಾಡಲು ಹೋದ ವೇಳೆ ಅಪಘಾತ ನಡೆದಿದೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಬಾಗಲಕೋಟೆ: ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ. ಕಾರು ಓವರ್ ಟೇಕ್ ಮಾಡಲು ಹೋದ ವೇಳೆ ಅಪಘಾತ ನಡೆದಿದೆ. ಮೃತ ವ್ಯಕ್ತಿಯನ್ನು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಸಾಗರ ತೆಕ್ಕೆನ್ನವರ (62) ಎಂದು ಗುರತಿಸಲಾಗಿದೆ.
ಅಪಘಾತದಲ್ಲಿ ಬಸ್ ಮುಂದಿನ ಗಾಜು ಜಖಂ ಆಗಿದ್ದು, ಕಾರು ನುಜ್ಜುಗುಜ್ಜಾಗಿದೆ. ಇನ್ನು ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.