ಬಾಗಲಕೋಟೆ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ
Stone Pelting in Bagalkot: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಘಟನೆಯಲ್ಲಿ ಎಸ್‌ಪಿ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ಸೇರಿ ಇಬ್ಬರಿಗೆ ಗಾಯಗಳಾಗಿತ್ತು. ಪ್ರಕರಣ ಸಂಬಂದ ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ.
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ. -
ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು (Bagalkot Stone Pelting Case) ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ - ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ - ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಘಟನೆಯಲ್ಲಿ ಎಸ್‌ಪಿ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ಸೇರಿ ಇಬ್ಬರಿಗೆ ಗಾಯಗಳಾಗಿತ್ತು. ಪ್ರಕರಣ ಸಂಬಂದ ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ.
8 ಆರೋಪಿಗಳ ಬಂಧನ
ಶಿವಾಜಿ ಮಹಾರಾಜರ ಜಯಂತೋತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್‌ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿ, ಎಂಟು ಮಂದಿಯನ್ನು ಬಂಧಿಸಲಾಗಿದೆ. ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಮೇಲೆ ಕಲ್ಲು ತೂರಾಟ ನಡೆದಿದ್ದು, ತಾವು ಸೇರಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
Stone Pelting: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ
ಬಂಧಿತರಲ್ಲಿ ಮುಖ್ಯ ಆರೋಪಿಯೂ ಸೇರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಏಳು ಮಂದಿ ಸೇರಿದ್ದಾರೆ. ನಿಷೇಧಾಜ್ಞೆಯನ್ನು ಫೆಬ್ರವರಿ 24ರವರೆಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.