ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bagalkot Bypoll 2026: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

Karnataka bypolls: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಉಮೇಶ್‌ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಪಕ್ಷದ ಪ್ರಮುಖರು, ಕಾರ್ಯಕರ್ತರ ಸಮ್ಮುಖದಲ್ಲಿ ಬೃಹತ್‌ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ.

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ (Bagalkot Bypoll 2026) ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ (Umesh Meti) ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ (Veeranna Charantimath) ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಸತೀಶ್‌ ಜಾರಕಿಹೊಳಿ ಸಾಥ್‌ ನೀಡಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಉಮೇದುವಾರಿಕೆ ಸಲ್ಲಿಕೆ ವೇಳೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.

ಇಬ್ಬರು ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿ, ನಾಮಪತ್ರ ಸಲ್ಲಿಸಿದ್ದಾರೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಶುಭ ಹಾರೈಸಿದ್ದಾರೆ.

ಇಡೀ ಸರ್ಕಾರ ಉಮೇಶ್ ಮೇಟಿ ಜತೆಗಿದೆ: ಡಿಕೆಶಿ

_Bagalkot Bypoll 2026

ಇಂದು ನಾವು ಬಸವಣ್ಣನವರ ನಾಡಿನಲ್ಲಿ ಇದ್ದೇವೆ. ನಾವು ನುಡಿದಂತೆ ನಡೆದುಕೊಂಡು ಮಾತು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುತ್ತಿವೆ. ಇಡೀ ಸರ್ಕಾರ ಉಮೇಶ್ ಮೇಟಿ ಅವರ ಜತೆಗಿದೆ. ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಅವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಅಭೂತಪೂರ್ವವಾಗಿ ಗೆಲ್ಲಿಸಬೇಕೆಂದು ಮತದಾರರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೋರಿದ್ದಾರೆ.

ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರ ಜತೆ ಭಾಗವಹಿಸಿದ ಬಳಕಿ ಬೃಹತ್‌ ಬಹಿರಂಗ ಸಭೆಯಲ್ಲಿ ಡಿಸಿಎಂ ಮಾತನಾಡಿದ್ದಾರೆ.

ಜನರ ಪ್ರೀತಿ, ಬೆಂಬಲ ಬಿಜೆಪಿಗೆ ಶ್ರೀರಕ್ಷೆ: ಜೋಶಿ

ಕ್ಷೇತ್ರದಾದ್ಯಂತ ಪಕ್ಷದ ಪರವಾದ ಅಲೆ ಕಂಡುಬರುತ್ತಿದ್ದು, ಜನರ ಪ್ರೀತಿ ಮತ್ತು ಬೆಂಬಲ ಭಾರತೀಯ ಜನತಾ ಪಕ್ಷಕ್ಕೆ ಶ್ರೀ ರಕ್ಷೆಯಾಗಲಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ಹಾಗೂ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಪಕ್ಷಕ್ಕೆ ಈ ಚುನಾವಣೆಯಲ್ಲಿ ಭವ್ಯ ಜಯ ತಂದುಕೊಡಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವರು ಮಾತನಾಡಿದ್ದಾರೆ.