ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡೋದನ್ನು ವಿಡಿಯೊ ಕಾಲ್‌ನಲ್ಲಿ ಅತ್ತೆ-ಮಾವನಿಗೆ ತೋರಿಸಿದ ಗಂಡ!

Bagalkot News: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ನೇಣಿನ ಕುಣಿಕೆಯಲ್ಲಿ ಪತ್ನಿ ನರಳಾಡುತ್ತಿದ್ದ ವೇಳೆ ವಿಡಿಯೊ ಕಾಲ್‌ ಮಾಡಿ, ಆಕೆಯ ತಂದೆ-ತಾಯಿಗೆ ಗಂಡ ತೋರಿಸಿದ್ದಾನೆ. ಅನೈತಿಕ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ನೇಣು ಹಾಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಪತ್ನಿಗೆ ನೇಣು ಹಾಕಿ ವಿಡಿಯೊ ಕಾಲ್‌ನಲ್ಲಿ ಅತ್ತೆ-ಮಾವನಿಗೆ ತೋರಿಸಿದ ಗಂಡ!

-

Prabhakara R
Prabhakara R Jul 28, 2026 4:20 PM

ಬಾಗಲಕೋಟೆ: ಅನೈತಿಕ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ನೇಣು ಹಾಕಿ ಪತಿ ಕೊಂದಿರುವ ಘಟನೆ ಜಿಲ್ಲೆಯ (Bagalkot) ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಭಾಗ್ಯಶ್ರೀ ಜಿಗಳೂರು ಅವರನ್ನು ಪತಿ ಪ್ರವೀಣ ಜಿಗಳೂರು ಮೊದಲು ಕಟ್ಟಿಗೆಯಿಂದ ಹಲ್ಲೆ ನಡೆಸಿ, ಬಳಿಕ ನೇಣು ಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ನೇಣಿನ ಕುಣಿಕೆಯಲ್ಲಿ ಪತ್ನಿ ನರಳಾಡುತ್ತಿದ್ದ ವೇಳೆ ವಿಡಿಯೊ ಚಿತ್ರೀಕರಿಸಿದ ಆರೋಪಿಯು, ಆಕೆಯ ತಂದೆ-ತಾಯಿಗೆ ವಿಡಿಯೊ ಕಾಲ್ ಮಾಡಿ ದೃಶ್ಯ ತೋರಿಸಿದ್ದಲ್ಲದೆ, ಕೆಲವರಿಗೆ ವಿಡಿಯೊ ಕಳುಹಿಸಿರುವುದಾಗಿ ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ಜಗಳದ ಕಾರಣ ತವರು ಮನೆ ಮಹಾಲಿಂಗಪುರಕ್ಕೆ ತೆರಳಿದ್ದ ಭಾಗ್ಯಶ್ರೀ ಅವರನ್ನು, "ಇನ್ನು ಚೆನ್ನಾಗಿ ಬದುಕೋಣ" ಎಂದು ಮನವೊಲಿಸಿ ಗಲಗಲಿಯ ಮನೆಗೆ ಕರೆತಂದಿದ್ದ ಪ್ರವೀಣ, ಸಂಜೆ ವೇಳೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಬೀಳಗಿ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಶಿವಮೊಗ್ಗದಲ್ಲಿ ಕಾರು ಅಪಘಾತ; ಬಿಎಸ್‌ಎನ್‌ಎಲ್ ನಿವೃತ್ತ ನೌಕರ ಸಾವು

ಶಿವಮೊಗ್ಗ: ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ ಬಿಎಸ್ಎನ್‌ಎಲ್‌ ನಿವೃತ್ತ ನೌಕರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದಾವಣಗೆರೆ ನಿವಾಸಿ ಸುರೇಶ್ (65) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಅವರು ತಮ್ಮ ಮಗನೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ಮರಳುತ್ತಿದ್ದರು. ಕಾರನ್ನು ಅವರ ಪುತ್ರ ಅಮೃತ್‌ (36) ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಅಪಘಾತದಂತೆ ಬಿಂಬಿಸಿ ಕೊಲೆ: 2014ರ ಮಂಗಳೂರು ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಏಕಾಏಕಿ ಕಾರಿನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ಮೋರಿಗೆ ಕಾರು ಅತಿ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಕ್ಕೂ ಭಾರೀ ಹಾನಿಯಾಗಿದೆ. ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.