ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಾಗಲಕೋಟೆಯಲ್ಲಿ ಹೀನ ಕೃತ್ಯ; ಕಂಠಪೂರ್ತಿ ಕುಡಿದು ಪತ್ನಿ ತಲೆ ಬೋಳಿಸಿದ ಪತಿರಾಯ!

Bagalkot News: ಬಾಗಲಕೋಟೆ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಲಾಟೆ ಮಾಡಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಪತಿ, ಬಳಿಕ ಪತ್ನಿಯ ಅರ್ಧತಲೆ ಬೋಳಿಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂಠಪೂರ್ತಿ ಕುಡಿದು ಪತ್ನಿ ತಲೆ ಬೋಳಿಸಿದ ಪತಿರಾಯ!

-

Prabhakara R Prabhakara R Sep 7, 2025 5:59 PM

ಬಾಗಲಕೋಟೆ: ಕಂಠಪೂರ್ತಿ ಕುಡಿದು ಬಂದ ಪತಿ ಮಹಾಶಯನೊಬ್ಬ ಪತ್ನಿಯ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಎಂಬಾತ ಕಂಠಪೂರ್ತಿ ಕುಡಿದು ಬಂದು ಪತ್ನಿ ಶ್ರೀದೇವಿಯ ಜತೆ ಜಗಳವಾಡಿದ್ದಾನೆ. ತನ್ನೊಂದಿಗೆ ತನ್ನ ಸ್ನೇಹಿತ ಸದಾಶಿವ ನ್ಯಾಮಗೌಡ ಎಂಬಾತನನ್ನು ಕರೆತಂದಿದ್ದು, ಗಲಾಟೆ ಮಾಡಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಪತ್ನಿಯ ಅರ್ಧತಲೆ ಬೋಳಿಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರತಿದಿನ ಮದ್ಯಸೇವಿಸಿ ಮನೆಗೆ ಬರುತ್ತಿದ್ದ ಪತಿ ಬಸಪ್ಪ, ಪತಿ ಮೇಲೆ ಹಲ್ಲೆ ನಡೆಸಿ ಹಿಂಸಿಸುತ್ತಿದ್ದ. ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಶ್ರೀದೇವಿ ಕೆಲದಿನಗಳ ಕಾಲ ತವರು ಮನೆಗೆ ಹೋಗಿದ್ದರು. ಎರಡು ತಿಂಗಳ ಹಿಂದೆ ಮನೆಗೆ ವಾಪಸ್ ಬಂದಿದ್ದರು. ನೆನ್ನೆ ರಾತ್ರಿ ಸ್ನೇಹಿತನ ಜತೆ ಸೇರಿ ಮತ್ತೆ ಕುಡಿದು ಬಂದು ಗಲಾಟೆ ಮಾಡಿರುವ ಪತಿ ಮಹಾಶಯ, ಪತ್ನಿ ಮೇಲೆ ಹಲ್ಲೆ ನಡೆಸಿ ಆಕೆಯ ಅರ್ಧತಲೆ ಬೋಳಿಸಿ ವಿಕೃತಿ ಮೆರೆದಿದ್ದಾನೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ; ಗಂಭೀರ ಗಾಯ

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆದಿದ್ದು ಇಡೀ (Stabbed Case) ಹುಬ್ಬಳ್ಳಿ ನಗರವನ್ನೇ ಬೆಚ್ಚಿ ಬೀಳಿಸಿದೆ. ಹುಬ್ಬಳ್ಳಿಯ ಕೊಪ್ಪೀಕರ ರಸ್ತೆಯಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದ್ದು ಪ್ರತಾಪ್ ಅಲಿಯಾಸ್ ಚೇತನ ಗೌಡರ (32) ಗೆ ಚಾಕು ಇರಿಲಾಗಿದೆ. ಹುಬ್ಬಳ್ಳಿ ತಾಲೂಕಿನ ಬಿಡನಾಳ ಮಾರುತಿ ನಗರದ ನಿವಾಸಿ ಪ್ರತಾಪ್ ಗೌಡ ಎಂದು ತಿಳಿದು ಬಂದಿದ್ದು, ಸೋನಿಯಾ ಗಾಂಧಿನಗರದ ಶಿರಿ ಹಾಗೂ ಇನ್ನಿಬ್ಬರಿಂದ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಗಣೇಶ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಾಪ್ ಗೆ ಚಾಕು ಇರಿದಿದ್ದಾರೆ. ಮೂತ್ರ ವಿಸರ್ಜನೆಗೆ ಎಂದು ಹೋಗುತ್ತಿದ್ದಾಗ ಏಕಾಏಕಿ ಚಾಕು ಇರಿಯಲಾಗಿದೆ. ಟ್ರಾನ್ಸ್ಪೋರ್ಟ್ ಕಂಪನಿ ಒಂದರಲ್ಲಿ ಪ್ರತಾಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಳೆದ ಒಂದು ತಿಂಗಳ ಹಿಂದೆ ಅಷ್ಟೇ ಪ್ರತಾಪ್ ಮದುವೆಯಾಗಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತಾಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನೂ ಓದಿ: Vijayapura crime news: ಭೀಮಾ ತೀರದ ಗ್ರಾಮ ಪಂಚಾಯತ್‌ ಅಧ್ಯಕ್ಷನ ಕೊಲೆ, ಚಡಚಣ ಪಿಎಸ್‌ಐ ಅಮಾನತು

ಹುಬ್ಬಳ್ಳಿಯ ಗಣೇಶ ವಿಸರ್ಜನೆ ಸಾಕಷ್ಟು ಇತಿಹಾಸ ಹೊಂದಿದೆ. ಮೆರವಣಿಗೆಯಲ್ಲಿ ಸುಮಾರು 4 ಲಕ್ಷ ಜನ ಸೇರಿದ್ದರು. ಇದೇ ಸಮಯದಲ್ಲಿಯೇ ಯುವಕನಿಗೆ ಚಾಕು ಇರಿಯಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.