ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vishwavani Impact: ವಿಶ್ವವಾಣಿ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ಅಗ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಭಾವಿ ಗ್ರಾಮದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಕುರಿತು ವಿಶ್ವವಾಣಿಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ್ದಾರೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಎಚ್ .ಡಿ. ಪಾಟೀಲ್ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀರಿನ ಕಾಮಗಾರಿ ಪರಿಶೀಲನೆ

-

Profile
Ashok Nayak Oct 1, 2026 10:10 PM

ಹುಣಸಗಿ: ಅಗ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಭಾವಿ ಗ್ರಾಮದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಕುರಿತು ವಿಶ್ವವಾಣಿಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ್ದಾರೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಎಚ್ .ಡಿ. ಪಾಟೀಲ್ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Vishwavani Impact: ಕೊಪ್ಪಳ ವಿವಿಯ ಅಕ್ರಮ ತನಿಖೆ: ವಿಶ್ವವಾಣಿ ವರದಿಯ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ

ಬಳಿಕ ಮಾತನಾಡಿದ ಅವರು, ಕರಿಭಾವಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳ ಲಾಗಿದ್ದು, ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿ ನಡೆಯದಂತೆ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

V Imapct 2

ಕಾಮಗಾರಿಗೆ ಬಳಸುವ ಎಲ್ಲ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು. ಗ್ರಾಮಸ್ಥರಿಗೆ ಮತ್ತೆ ನೀರು ಸಿಗುತ್ತದೆಯೋ ಇಲ್ಲವೋ ಎಂಬ ಆತಂಕ ಉಂಟಾಗದಂತೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು. ಸರಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.