ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Mohan Bhagwat: ಬಾಗಲಕೋಟೆಯ ಕಲಾದಗಿಗೆ ಮೋಹನ್ ಭಾಗವತ್ ಭೇಟಿ; ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆ

RSS chief Mohan Bhagwat: ಭಾಗಲಕೋಟೆಯ ಆರ್‌ಎಸ್‌ಎಸ್‌ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ನಿವಾಸಕ್ಕೆ ಮೋಹನ್ ಭಾಗವತ್ ಅವರು ಭೇಟಿ ನೀಡಿದ್ದರು. ಝಡ್ ಪ್ಲಸ್ ಭದ್ರತೆ ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಬಾಗಲಕೋಟೆಯ ಕಲಾದಗಿಗೆ ಮೋಹನ್ ಭಾಗವತ್ ಭೇಟಿ

-

Prabhakara R
Prabhakara R Jul 14, 2026 4:47 PM

ಬಾಗಲಕೋಟೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಅವರು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ್ದರು. ಗಡಿಭಾಗದ ಬೆಳಗಾವಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಾರ್ಗಮಧ್ಯೆ ಅವರು ಕಲಾದಗಿಯ ಸಂಘದ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ಮನೆಗೆ ಭೇಟಿ ನೀಡಿದ್ದರು.

ದೇಶದ ಅತ್ಯುನ್ನತ ಝಡ್ ಪ್ಲಸ್ ಭದ್ರತೆ ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಗ್ರಾಮಕ್ಕೆ ಭೇಟಿ ನೀಡಿದ ಅವರು, ನೇರವಾಗಿ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ನಿವಾಸಕ್ಕೆ ತೆರಳಿದರು.

ಡಾ. ಪ್ರವೀಣ್ ಭಜಂತ್ರಿ ಅವರ ಮನೆಯಲ್ಲಿ ಸುಮಾರು 10 ನಿಮಿಷಗಳ ಕಾಲ ಕಳೆದ ಮೋಹನ್‌ ಭಾಗವತ್‌ ಪ್ರವೀಣ್ ಅವರ ಕುಟುಂಬ ಸದಸ್ಯರೊಂದಿಗೆ ಅತ್ಯಂತ ಆತ್ಮೀಯವಾಗಿ ಮಾತನಾಡಿಸಿ ಕುಶಲೋಪರಿ ವಿಚಾರಿಸಿ, ಚಹಾ ಸೇವಿಸಿದರು. ಸಂಘದ ಪರಮೋಚ್ಛ ನಾಯಕರೇ ತಮ್ಮ ಮನೆಗೆ ಭೇಟಿ ನೀಡಿದ್ದರಿಂದ ಭಜಂತ್ರಿ ಕುಟುಂಬದಲ್ಲಿ ಹರ್ಷ ವ್ಯಕ್ತವಾಗಿದೆ.

"ಬಿಡಿದ ಟೌನ್‌ಶಿಪ್‌ಗಾಗಿ ಭೂಸ್ವಾಧೀನ ಕೈಬಿಡದಿದ್ದರೆ ವಿಧಾನಸೌಧದ ಎದುರು ಧರಣಿ"; CMಗೆ ಪತ್ರ ಬರೆದ H.D ದೇವೇಗೌಡ

ಕಲಾದಗಿಯಲ್ಲಿ ಕೆಲಕಾಲ ಕಳೆದ ಬಳಿಕ ಮೋಹನ್ ಭಾಗವತ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ವಿಜಯಪುರ ಜಿಲ್ಲೆಗೆ ಪ್ರಯಾಣ ಬೆಳೆಸಿದರು.