ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Music Mailari Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್

Bagalkot News: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದ ನಿವಾಸಿಯಾಗಿರುವ ಮ್ಯೂಸಿಕ್ ಮೈಲಾರಿ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿತ್ತು. ಇದೀಗ ಆರೋಪಿಯನ್ನು ಪೊಲೀಸರು ವಿಜಯಪುರದ ತಿಕೋಟಾದಲ್ಲಿ ಬಂಧಿಸಿದ್ದಾರೆ.

ಗಾಯಕ ಮ್ಯೂಸಿಕ್‌ ಮೈಲಾರಿ

ಬಾಗಲಕೋಟೆ, ಡಿ.17: ಪೋಕ್ಸೊ ಪ್ರಕರಣದಲ್ಲಿ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ (Music Mailari Case) ಬಂಧನವಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದ ನಿವಾಸಿಯಾಗಿರುವ ಮ್ಯೂಸಿಕ್ ಮೈಲಾರಿ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು, ವಿಜಯಪುರ ಬಳಿಯ ತಿಕೋಟಾದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಅವರು, ಪ್ರಕರಣ ದಾಖಲಾಗುತ್ತಿದಂತೆ ಮೈಲಾರಿ ಬಂಧನಕ್ಕೆ ಬಾಗಲಕೋಟೆ ಪೋಲಿಸರು ಬಲೆ ಬೀಸಿದ್ದರು. ನೆನ್ನೆಯಿಂದ ನಮ್ಮ ತಂಡ ಮೈಲಾರಿ ಬೆನ್ನು ಬಿದ್ದಿತ್ತು. ವಿಜಯಪುರ ಮಾರ್ಗವಾಗಿ ತಿಕೋಟಾದಿಂದ ವಿಜಯಪುರಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಅಕ್ಟೋಬರ್ 24ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ, ಬಾಲಕಿ ದೂರು ನೀಡಿದ್ದಳು. ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರು ಅಪರಾಧ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಳು.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,800 ರೈತರು ಆತ್ಮಹತ್ಯೆ

ಧಾರವಾಡದಲ್ಲಿ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ. ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಬುಧವಾರ ಬೆಳಗ್ಗೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.