ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA HY Meti's Funeral: ಸ್ವಗ್ರಾಮ ತಿಮ್ಮಾಪುರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ಎಚ್‌.ವೈ.ಮೇಟಿ ಅಂತ್ಯಕ್ರಿಯೆ

Bagalkot News: ಬುಧವಾರ ಬೆಳಗ್ಗೆ ಶಾಸಕ ಮೇಟಿ ಅವರ ಪಾರ್ಥಿವ ಶರೀರವನ್ನು ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಬಾಗಲಕೋಟೆಯಿಂದ ಸ್ವಗ್ರಾಮ ತಿಮ್ಮಾಪುರಕ್ಕೆ ತರಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಮೇಟಿ ಅವರ ಸ್ವಗ್ರಾಮಕ್ಕೆ ಬಂದು ಅಂತಿಮ ದರ್ಶನ ಪಡೆದರು.

ಬಾಗಲಕೋಟೆ, ನ.5: ಕಾಂಗ್ರೆಸ್‌ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ ಮೇಟಿ ಅವರ ಅಂತ್ಯಕ್ರಿಯೆ (MLA HY Meti's Funeral) ಸ್ವಗ್ರಾಮವಾದ ಬಾಗಲಕೋಟೆಯ ಜಿಲ್ಲೆಯ ತಿಮ್ಮಾಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅವರ ತಂದೆ, ತಾಯಿ ಸಮಾಧಿ ಪಕ್ಕ ಮೇಟಿಯವರ ಅಂತ್ಯಕ್ರಿಯೆ ನಡೆಸಲಾಗಿದೆ.

ಬುಧವಾರ ಬೆಳಗ್ಗೆ ಶಾಸಕ ಮೇಟಿ ಅವರ ಪಾರ್ಥಿವ ಶರೀರವನ್ನು ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಬಾಗಲಕೋಟೆಯಿಂದ ಸ್ವಗ್ರಾಮ ತಿಮ್ಮಾಪುರಕ್ಕೆ ತರಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಮೇಟಿ ಅವರ ಸ್ವಗ್ರಾಮಕ್ಕೆ ಬಂದು ಅಂತಿಮ ದರ್ಶನ ಪಡೆದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೇಟಿಯವರು ನಿಷ್ಠಾವಂತ ರಾಜಕಾರಣಿ, ನನಗೆ ಅತೀ ನಿಷ್ಠರಾಗಿದ್ದರು. ಅವರನ್ನು ಕಳೆದುಕೊಂಡ ನನಗೆ ವೈಯಕ್ತಿಕವಾಗಿ ನಷ್ಟವಾಗಿದೆ. ನನ್ನ ಜತೆ ಹೆಜ್ಜೆಗೆ ಹೆಜ್ಜೆ ಹಾಕಿದವರು. ರಾಜಕೀಯ ಬದಲಾವಣೆಗಳಲ್ಲೂ ನನ್ನನ್ನು ಹಿಂಬಾಲಿಸಿದರು. ಅವರಂತಹ ವ್ಯಕ್ತಿತ್ವ ಅತೀ ವಿರಳ ಎಂದು ಭಾವುಕಾರದರು.

HY Meti  (1)

ಈ ಸುದ್ದಿಯನ್ನೂ ಓದಿ | HY Meti Death: ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಸಿಎಂ ಸಿದ್ದರಾಮಯ್ಯ ಜತೆ ಸಚಿವರಾದ ಎಚ್.ಸಿ ಮಹದೇವಪ್ಪ, ಎಚ್.ಕೆ ಪಾಟೀಲ್ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ್, ಶಿವಾನಂದ್ ಪಾಟೀಲ್, ಎಂ.ಬಿ. ಪಾಟೀಲ್, ಸಂತೋಷ್ ಲಾಡ್, ಸಿಎಂ ಪುತ್ರ ಎಂಎಲ್‌ಸಿ ಯತೀಂದ್ರ, ರಾಜ್ಯಸಭಾ ಸದಸ್ಯ ನಾರಾಯಣ್ ಸಾ ಭಾಂಡಗೆ, ಮಾಜಿ ಸಚಿವರಾದ ಎಸ್.ಆರ್ ಪಾಟೀಲ್, ಸಿಎಂ ಇಬ್ರಾಹಿಂ ಜಿ.ಎಸ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಜನತಾ ಪರಿವಾರದಿಂದ ಬೆಳೆದು ಬಂದ ರಾಜಕಾರಣಿ

1946ರ ಅಕ್ಟೋಬರ್ 9ರಂದು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಜನಿಸಿದ ಎಚ್‌.ವೈ. ಮೇಟಿ ಅವರ ಪೂರ್ಣ ಹೆಸರು ಹುಲ್ಲಪ್ಪ ಯಮನಪ್ಪ ಮೇಟಿ. ಇವರು ಸದ್ಯ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಹಾಲಿ ಶಾಸಕರಾಗಿದ್ದರು.

ಮೇಟಿಯವರು ಜನತಾ ಪರಿವಾರದಿಂದ ಬೆಳೆದು ಬಂದ ರಾಜಕಾರಣಿಯಾಗಿದ್ದಾರೆ. ಗುಳೇದಗುಡ್ಡ ಕ್ಷೇತ್ರದಿಂದ ಎರಡು ಬಾರಿ, ಬಾಗಲಕೋಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದಾರೆ. ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು‌.

ಈ ಸುದ್ದಿಯನ್ನೂ ಓದಿ | CM Siddaramaiah: ಅಕ್ರಮ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ: CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಅರಣ್ಯ ಖಾತೆ, ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸ್ವಗ್ರಾಮ ತಿಮ್ಮಾಪೂರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹುದ್ದೆಯೊಂದಿಗೆ ರಾಜಕೀಯಕ್ಕಿಳಿದರು. ಟಿಎಪಿಸಿಎಂಎಸ್ ಅಧ್ಯಕ್ಷ , ಶಾಸಕ, ಸಂಸದ, ಸಚಿವ ಹೀಗೆ ರಾಜಕೀಯದಲ್ಲಿ ಉನ್ನತಿಗೇರಿದವರು. ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾದ ಮೇಟಿ ಸಿದ್ದರಾಮಯ್ಯ ಜನತಾ ದಳ ತೊರೆದಾಗ ಸಾಥ್ ನೀಡಿದರು. ನಂತರ ಸಿದ್ದರಾಮಯ್ಯ ಜತೆಗೆ ಕಾಂಗ್ರೆಸ್‌ಗೆ ಕಾಲಿಟ್ಟರು. ಕಳೆದ ವರ್ಷ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದರು.