ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು, ಇದು ಕಾರ್ಯಕರ್ತರ ಗೆಲುವು: ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ

Bagalkot By-Election Results: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು 22,332 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ವೀರಣ್ಣ ಚರಂತಿಮಠ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜೇತ ಅಭ್ಯರ್ಥಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ.

ಬಾಗಲಕೋಟೆ: ನನ್ನ ಗೆಲುವಿಗೆ ಕಾರಣರಾದ ಬಾಗಲಕೋಟೆ ಕ್ಷೇತ್ರದ (Bagalkot By-Election Results) ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ. ಇದು ನನ್ನ ಗೆಲುವಲ್ಲ, ಕಾರ್ಯಕರ್ತರ ಗೆಲುವು ಎಂದು ಬಾಗಲಕೋಟೆ ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ (Umesh Meti) ಹೇಳಿದ್ದಾರೆ.

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ತಂದೆಯನ್ನು ಕಳೆದುಕೊಂಡಿರುವ ನನಗೆ, ಸಿಎಂ ಸಿದ್ದರಾಮಯ್ಯ ಅವರು ತಂದೆ ಸ್ಥಾನದಲ್ಲಿ ನಿಂತು ಬೆಂಬಲ ನೀಡಿದ್ದಾರೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಗೆಲುವಿನಿಂದ ನಮ್ಮೆಲ್ಲಾ ಕಾರ್ಯಕರ್ತರು ಸಂತಸದಿಂದ ಇದ್ದಾರೆ. ಈ ಸಂದರ್ಭದಲ್ಲಿ ತಂದೆಯವರು ಇದ್ದಿದ್ದರೆ ಹೆಚ್ಚು ಖುಷಿ ಪಡುತ್ತಿದ್ದರು ಎಂದು ಭಾವುಕರಾಗಿದ್ದಾರೆ.

22,332 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Bagalkot By-Election Results 2026) ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ (Umesh Meti) ಅವರು 22,332 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ವೀರಣ್ಣ ಚರಂತಿಮಠ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್​​ ಮೇಟಿ ಪರ 98,919 ಮತ​​ ಚಲಾವಣೆ ಆಗಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ್​​ಗೆ ಒಟ್ಟು 76,587 ಮತಗಳು ಬಿದ್ದಿವೆ.

ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಹಿರಿಯ ಶಾಸಕರಾಗಿದ್ದ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡು ಬಂದ ಉಮೇಶ್‌ ಮೇಟಿ 22 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಉಮೇಶ್‌ ಮೇಟಿ ಅವರ ತಂದೆ, ಮಾಜಿ ಸಚಿವ ಎಚ್‌ವೈ ಮೇಟಿ ಅವರು ಬಾಗಲಕೋಟೆ ರಾಜಕಾರಣದಲ್ಲಿ ದಶಕಗಳ ಕಾಲ ಪ್ರಭಾವ ಹೊಂದಿರುವ ನಾಯಕ. ಅವರ ನಿಧನದ ಹಿನ್ನೆಲೆಯಲ್ಲಿ ಉಂಟಾದ ಅನುಕಂಪವು ಮತಗಳಾಗಿ ಪರಿವರ್ತನೆಯಾಗಿರುವುದು ಈ ಗೆಲುವಿನ ಪ್ರಮುಖ ಕಾರಣವಾಗಿದೆ.

Davanagere South By-Election Results: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು

ಇನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಹುಕಾಲದ ಆಪ್ತ ಎಚ್‌ವೈ ಮೇಟಿಯವರ ಪುತ್ರನನ್ನು ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರಲೇಬೇಕು ಎಂದು ಪಣತೊಟ್ಟಿದ್ದರು. ಇದಕ್ಕಾಗಿಯೇ ಒಂದು ವಾರ ಬಾಗಲಕೋಟೆಯಲ್ಲಿಯೇ ಇದ್ದು ಪ್ರಚಾರ ನಡೆಸಿದ್ದರು. ಹಾಗೆಯೇ ಕ್ಷೇತ್ರದಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದು, ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳು ಮಹಿಳಾ ಮತದಾರರ ಮೇಲೆ ಪ್ರಭಾವ ಬೀರಿವೆ.