ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagalkot Accident: ಬಾಗಲಕೋಟೆಯಲ್ಲಿ ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರ ಸಾವು

Bagalokot News: ಬಾಗಲಕೋಟೆಯ ಸೀಮಿಕೇರಿ ಬೈ ಪಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ: ಬಾಗಲಕೋಟೆಯ ಸೀಮಿಕೇರಿ ಬೈ ಪಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ರಮೇಶ್ ಹೂಗಾರ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಶಾಲೆಗೆ ಹೋಗಲು ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

ಬೆಳಗಾವಿ: ಬೆಳಗಾವಿಯಲ್ಲಿ (Belagavi crime news) ಘೋರ ಘಟನೆಯೊಂದು ನಡೆದಿದ್ದು, ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ (Student) ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವದಲ್ಲಿ ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿ ಯಶರಾಜ ಅನಿಲ ಪಾಚಂಗೆ (15) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

8ನೇ ತರಗತಿ ಓದುತ್ತಿದ್ದ ಯಶರಾಜ ಕಳೆದ 8 ದಿನದಿಂದ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗುವಂತೆ ಒತ್ತಾಯಿಸಿದಾಗ ಕುಂಬಾರನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್‌ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಸಾವು

ಹಾವೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ (Haveri News) ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿದ್ದ ತೆಂಗಿನಮರದ ಬಳಿ ಹಾದು ಹೋಗಿದ್ದ ವಿದ್ಯುತ್ ತಂತಿ ಬಿದ್ದು ಅವಘಡ ನಡೆದಿದೆ.

ಇದನ್ನೂ ಓದಿ: Murder Case: ಅಕ್ಕನ ಪಕ್ಕಕ್ಕೆ ಬಂದು ಸಿಕ್ಕಿಹಾಕಿಕೊಂಡವನನ್ನು ಕಲ್ಲು ಎತ್ತಿ ಹಾಕಿ ಕೊಂದ ತಮ್ಮ

ಹಂಸಭಾವಿ ಗ್ರಾಮದ ಮೃತ್ಯುಂಜಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅವಘಡ ಸಂಭವಿಸಿದೆ. ಮಹಮ್ಮದ್ ಶಾ ಗೌಸ್ ರಟ್ಟಿಹಳ್ಳಿ (12) ಮೃತ ಬಾಲಕ. ಇನ್ನಿಬ್ಬರು ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ಮಧ್ನಾಹ್ನ ಊಟಕ್ಕೆ ಬಿಟ್ಟ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.