ಲೈಂಗಿಕ ಅಲ್ಪಸಂಖ್ಯಾತರಿಗೆ ದಾರಿದೀಪ ಶ್ರಮ ಚೇತನ: ಉಮಾ ಮಹಾದೇವನ್

ಲೈಂಗಿಕ ಅಲ್ಪಸಂಖ್ಯಾತರಿಗೆ ದಾರಿದೀಪ ಶ್ರಮ ಚೇತನ: ಉಮಾ ಮಹಾದೇವನ್

image-46cfca45-380d-4339-8003-d716e8e68fad.jpg
Profile Vishwavani News November 29, 2022
image-c342f6bf-6db8-4c3d-b6b5-fb98be912a04.jpg ಬಾಗಲಕೋಟೆ: ಲೈಗಿಂಕ ಅಲ್ಪಸಂಖ್ಯಾತರು ಸಮಾಜದಲ್ಲಿ ಗೌರವದಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರಮ ಚೇತನ-2022 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾ ಯರ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜಿಲ್ಲಾ ಪಂಚಾಯತ ಅವತಿಯಿಂದ ಹಮ್ಮಿಕೊಂಡ ಶ್ರಮ ಚೇತನ-2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಚೇತನ ಕಾರ್ಯಕ್ರಮದ ಮೂಲಕ ಲೈಂಗಿಕ ಅಲ್ಪಸಂಖ್ಯಾರಲ್ಲಿ ಜಾಗೃತಿ ಮೂಡಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಾಗುತ್ತಿದೆ. ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ನೀಡಿ ದಿನಕ್ಕೆ 309 ರೂ.ಗಳಂತೆ 100 ದಿನಗಳ ಕೆಲಸ ನೀಡಲಾಗುತ್ತಿದೆ ಎಂದರು. ವೈಯಕ್ತಿಕ ಕಾಮಗಾರಿಗಳಾದ ಕುರಿ, ಮೇಕೆ, ದನದ ಶೆಡ್ ನಿರ್ಮಿಸಲು ನರೇಗಾದಡಿ ಅವಕಾಶವಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಸಹ ನೀಡಲಾಗುತ್ತಿದೆ. ಈ ಎಲ್ಲ ಯೋಜನೆಗಳ ಲಾಭ ಪಡೆಯಲು ಲಿಂಗತ್ವ ಅಲ್ಪಸಂಖ್ಯಾ ತರ ಪಡೆಯಲು ಮುಂದೆ ಬರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಸರಕಾರ ಈ ನಿಟ್ಟಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಮಾತನಾಡಿ ಕಾರ್ಮಿಕ ಜೀವಿ ಶ್ರಮಜೀವಿಯಾಗಬೇಕೆಂಬ ನಿಟ್ಟಿನಲ್ಲಿ ಶ್ರಮ ಚೇತನನ್ನು ಸರಕಾರ ರೂಪಿಸಿದ್ದು, ಇದರ ಪ್ರಯೋಜನ ಪಡೆಯುವ ಮೂಲಕ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಹೃದಯ ವೈಶಾಲತೆ ಪಡೆಯುವಂತಾಗಬೇಕು. ನಿಮಗಾಗಿ ಸರಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದು, ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಯೋಜನೆ ಈದಾಗಿದೆ. ಇದರ ಲಾಭ ಪಡೆದುಕೊಂಡು ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು ಎಂದರು. ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮಾತನಾಡಿ ಸಮಾಜದಲ್ಲಿರುವ ಪಿಡುಗುಗಳು ಹೋಗಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯೋಗ ಖಾತ್ರಿಯಡಿ ಮನೆ ಮನೆಗೆ ತೆರಳಿ ಜಾಬ್ ಕಾರ್ಡ ನೀಡುವ ಕಾರ್ಯ ಜಿ.ಪಂ ಸಿಇಓ ಅವರು ಮಾಡುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗನನೆಗೆ ತೆಗೆದುಕೊಳ್ಳಲಾಗುವುದು. ಮತದಾನ ಪರಿಷ್ಕರಣೆ ಕಾರ್ಯ ನಡೆದಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಪಟ್ಟಿಯನ್ನು ಹೆಸರು ನೋಂದಾಯಿಸಿ ಕೊಂಡು ಹಕ್ಕು ಚಲಾಯಿಸುವಂತಾಗಬೇಕು ಎಂದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ ಆಯುಕ್ತರಾದ ಶಿಲ್ಪಾ ನಾಗ್ ಪ್ರಾಸ್ತಾವಿಕಚಾಗಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರಾದ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಗ್ರಾ.ಪಂ ಸದಸ್ಯೆ ದೇವಿಕಾ, ವಿಜಯನಗರ ಜಿಲ್ಲೆಯ ಕಲ್ಲಹಳ್ಳಿ ಗ್ರಾ.ಪಂ ಸದಸ್ಯೆ ಸುಧಾ ಜೋಗತಿ, ಕೊಪ್ಪಳ ಜಿಲ್ಲೆಯ ಶರಣಮ್ಮ, ಧಾರವಾಡ ಜಿಲ್ಲೆಯ ಮಂಜುಳಾ ತಮ್ಮ ಯಶಸ್ವಿಯ ಅನುಭವವನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಉದ್ಯೋಗ ಖಾತ್ರಿ ಯೋಜನೆಯ ಜಾಬ್ ಕಾರ್ಡ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಎರಡು ಸ್ವಸಹಾಯ ಗುಂಪುಗಳಿಗೆ 1.50 ಲಕ್ಷ ರೂ.ಗಳ ಸಹಾಯಧನದ ಚೆಕ್‍ನ್ನು ವಿತರಿಸ ಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್, ಗದಗ ಜಿಲ್ಲೆ ಸಿಇಓ ಡಾ.ಸುಶೀಲ ಬಿ, ವಿಜಯಪಯರ ಜಿಲ್ಲಾ ಸಿಇಓ ರಾಹುಲ್ ಸಿಂಧೆ, ಯುಕೆಪಿ ಜಿಎಂ ರಾಹುಲ್‍ಪಾಂಡೆ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಲೈಂಗಿಕ ಅಲ್ಪಸಂಖ್ಯಾತರಿಗೆ ಸನ್ಮಾನ: ಗ್ರಾಮ ಪಂಚಾಯತಿಯ 4 ಜನ ಸದಸ್ಯರಿಗೆ, ನರೇಗಾದಡಿ ಕಾರ್ಯನಿರ್ವಹಿಸುತ್ತಿರುವ 28 ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವಯೋಪಾಯ ಯೋಜನೆಯಡಿ ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು 15 ಜನ ಸೇರಿ ಒಟ್ಟು 47 ಜನರನ್ನು ಸನ್ಮಾನಿಸಲಾಯಿತು.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ