ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Water crisis: ಬಾಗಲಕೋಟೆಯ ಗುಡೂರ ಎಸ್.ಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ; ಗ್ರಾಪಂ ಕಚೇರಿಗೆ ಜನರ ಮುತ್ತಿಗೆ

Bagalkot News: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರ (ಎಸ್.ಸಿ) ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಹದಿನೈದು ದಿನ ಕಳೆದರೂ ಶುದ್ಧ ಕುಡಿಯುವ ನೀರು ಬಂದಿಲ್ಲ. ಬಂದ ನೀರು ಕೂಡ ಕಲುಷಿತಗೊಂಡಿರುವುದರಿಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಯ ಗುಡೂರ ಎಸ್.ಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ

-

Prabhakara R Prabhakara R Sep 6, 2025 4:18 PM

ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರ (ಎಸ್.ಸಿ) ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಲ್ಲದೆ (Water crisis) ಗ್ರಾಮಸ್ಥರು ಪರದಾಡುತ್ತಿದ್ದಾರೆ. ಹೀಗಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹದಿನೈದು ದಿನ ಕಳೆದರೂ ಶುದ್ಧ ಕುಡಿಯುವ ನೀರು ಬಂದಿಲ್ಲ. ಬಂದ ನೀರು ಕೂಡ ಕಲುಷಿತಗೊಂಡಿರುವುದರಿಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀರು ಬಿಡಲು ಕೇಳಿಕೊಂಡರೂ ಪಿಡಿಒ ಮತ್ತು ಗ್ರಾಪಂ ಅಧ್ಯಕ್ಷರು ಸ್ಪಂದಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸುಮಾರು 20 ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಆವರಣದಲ್ಲಿ ಧಿಕ್ಕಾರ ಕೂಗಿ ಸಾರ್ವಜನಿಕರು ಕಿಡಿಕಾರಿದ್ದಾರೆ.



ಗುಡೂರ ಘಟಕದ ಕರವೇ ಅಧ್ಯಕ್ಷ ರಿಯಾಜ್ ವಾಲೀಕಾರ್ ಸೇರಿ ಅನೇಕ ಸಾರ್ವಜನಿಕರು ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯಿತಿ ಅವ್ಯವಸ್ಥೆಗೆ ಹಿಡಿಶಾಪ ಹಾಕಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ಗ್ರಾ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | Ashoka Emblem: ಮಸೀದಿಯ ಅಡಿಗಲ್ಲಿನ ಮೇಲೆ ಅಶೋಕ ಲಾಂಛನ ಕೆತ್ತನೆ; ಧರ್ಮಕ್ಕೆ ವಿರುದ್ಧ ಎಂದು ಧ್ವಂಸಗೊಳಿಸಿದ ಜನ!