ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ballari Firing: ಶಾಸಕ ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಜನಾರ್ದನ ರೆಡ್ಡಿ, ಭರತ್‌ ರೆಡ್ಡಿ -

ಹರೀಶ್‌ ಕೇರ
ಹರೀಶ್‌ ಕೇರ Jan 3, 2026 11:49 AM

ಬಳ್ಳಾರಿ, ಜ.03: ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ (Valimiki) ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ಸಾವಿಗೀಡಾಗಿದ್ದ (Ballari Firing) ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ಸೇರಿ ಹಲವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಈ ನಡುವೆ, ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

ಶುಕ್ರವಾರ (ಜ.2) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಮ್ಮುಖದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಾರ್ದನ ರೆಡ್ಡಿ ಅವರು ಹಲ್ಲೆ ಹಾಗೂ ಕೊಲೆ ಯತ್ನ ಆರೋಪದ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಅವರು ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪ ಮೇಲೆ ದೂರು ನೀಡಿದ್ದರು.

ಸ್ವತಃ ಎಎಸ್‌ಪಿ ರವಿಕುಮಾರ್ ಹಾಗೂ ಬ್ರೂಸ್‌ಪೇಟೆ ಠಾಣೆ ಪೊಲೀಸರು ಜನಾರ್ದನ ರೆಡ್ಡಿ ಮನೆಗೆ ಬಂದು ದೂರು ಸ್ವೀಕರಿಸಿದ್ದರು. ದೂರಿನನ್ವಯ ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

Ballari firing: ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ಇನ್ನು ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಬ್ರೂಸ್‌ಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಕರಣದ ವಿವರ

ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಬೇಕಿದ್ದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುರುವಾರ (ಜ.1) ಒಂದು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆ ಪ್ರಾರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದರು. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದರು.

Bellari Firing: ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ ದಾಖಲು, ಬುಲೆಟ್‌ ಖಾಸಗಿ ರಿವಾಲ್ವರ್‌ನದ್ದು

ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಇನ್ನೂ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯಗೊಂಡಿದ್ದರು. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ ನಿಷೇಧಾಜ್ಞೆ ಜಾರಿಗೊಳಿಸಿದ್ದರು.