ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Ballari Firing: ಬಳ್ಳಾರಿ ಗಲಭೆ ಪ್ರಕರಣ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್​​ ಹೇಳಿದ್ದರು. ಆ ಬೆನ್ನಲ್ಲೇ ಆದೇಶ ಹೊರಬಿದ್ದಿದೆ. ಬ್ಯಾನರ್​​ ಗಲಾಟೆ ಪ್ರಕರಣದ ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೂ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು.

ಬಳ್ಳಾರಿ ಗಲಭೆ ಪ್ರಕರಣ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಮೃತ ಕಾರ್ಯಕರ್ತ -

ಹರೀಶ್‌ ಕೇರ
ಹರೀಶ್‌ ಕೇರ Jan 10, 2026 7:33 AM

ಬಳ್ಳಾರಿ, ಜ.10: ವಾಲ್ಮೀಕಿ ಬ್ಯಾನರ್‌ ಅಳವಡಿಸುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಉಂಟಾದ ಕಾರ್ಯಕರ್ತನ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ (CID) ವಹಿಸಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.

ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್​​ ಹೇಳಿದ್ದರು. ಆ ಬೆನ್ನಲ್ಲೇ ಆದೇಶ ಹೊರಬಿದ್ದಿದೆ. ಬ್ಯಾನರ್​​ ಗಲಾಟೆ ಪ್ರಕರಣದ ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೂ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು.

ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು, ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ. ಅಗತ್ಯಬಿದ್ದರೆ ಸಿಐಡಿಗೆ ಪ್ರಕರಣ ಕೊಡುತ್ತೇವೆ ಎಂದು ಹೇಳಿದ್ದರು.

ರಾಜಶೇಖರ್ ಸಾವಿಗೆ ಶಾಸಕ ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿಯೇ ನೇರ ಕಾರಣ, ಇಬ್ಬರನ್ನೂ ತಕ್ಷಣ ಬಂಧಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ. ಮೊನ್ನೆಯಷ್ಟೇ ಎರಡು ಬಾರಿ ರಾಜಶೇಖರ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದಿದ್ದ ರೆಡ್ಡಿ ಈಗ ಅಂತ್ಯಕ್ರಿಯೆ ಸಂಬಂಧ ಇನ್ನೊಂದು ವಿಡಿಯೋ ರಿಲೀಸ್ ಮಾಡಿದ್ದಾರೆ. ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ಅಂತ್ಯಕ್ರಿಯೆಯಲ್ಲಿ ಸಾಕ್ಷ್ಯನಾಶದ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಸಾಕ್ಷ್ಯಾಧಾರ ರಿಲೀಸ್ ಮಾಡಿದ್ದಾರೆ. ಮೊದಲು ಅಂತ್ಯಸಂಸ್ಕಾರಕ್ಕೆ ಗುಂಡಿ ತೋಡಿ ಬಳಿಕ ಸುಟ್ಟು ಹಾಕಿದ್ದಾರೆ. ಕಟ್ಟಿಗೆ ಬದಲು ಗ್ಯಾಸ್‌ನಿಂದ ಮೃತದೇಹ ಸುಟ್ಟಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ.

ಸ್ಮಶಾನದಲ್ಲಿ ಗುಂಡಿ ತೋಡುವ ಸೋಮ ಎಂಬ ವ್ಯಕ್ತಿಯ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶಾಸಕ ಭರತ್ ರೆಡ್ಡಿ ಸೂಚನೆಯಂತೆಯೇ ಮೃತದೇಹವನ್ನು ಸುಡಲಾಗಿದೆ ಅಂತ ವಿಡಿಯೋ ಸಾಕ್ಷ್ಯ ನೀಡಿದ್ದಾರೆ. ಬಳ್ಳಾರಿ ಮೇಲೆ ಹಿಡಿತ ಸಾಧಿಸಲು ಮುಂದಾಗಿರುವ ಬಿಜೆಪಿ ಇದೇ 17ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದೆ.