ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BJP Padayatra: ʼಬಳ್ಳಾರಿ ಚಲೋ' ಪಾದಯಾತ್ರೆ ಸಮಾರೋಪ; ಬಿಜೆಪಿಯಿಂದ 16 ನಿರ್ಣಯಗಳು

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ 10 ದಿನಗಳ ಕಾಲ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶಂಖನಾದ ಮೊಳಗಿಸಿ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು.

ʼಬಳ್ಳಾರಿ ಚಲೋ' ಪಾದಯಾತ್ರೆ ಸಮಾರೋಪ; ಬಿಜೆಪಿಯಿಂದ 16 ನಿರ್ಣಯಗಳು

ಬಳ್ಳಾರಿಯಲ್ಲಿ ಬಿಜೆಪಿ ಪಾದಯಾತ್ರೆಯ ಸಮಾರೋಪ ಸಮಾರಂಭ. -

Prabhakara R
Prabhakara R Sep 10, 2026 9:23 PM

ಬಳ್ಳಾರಿ: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ʼಬಳ್ಳಾರಿ ಚಲೋʼ ಪಾದಯಾತ್ರೆ ಗುರುವಾರ ಮುಕ್ತಾಯಗೊಂಡಿದೆ. ಲಿಂಗಸುಗೂರಿನಿಂದ ಆರಂಭಗೊಂಡಿದ್ದ ಪಾದಯಾತ್ರೆ ಒಂಬತ್ತು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿ ಬಳ್ಳಾರಿಯಲ್ಲಿ ಬೃಹತ್ ಜನಸಮಾವೇಶದೊಂದಿಗೆ ಸಮಾರೋಪಗೊಂಡಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಹರಿಹಾಯ್ದ ಬಿಜೆಪಿ ನಾಯಕರು, 16 ನಿರ್ಣಯಗಳನ್ನು ಕೈಗೊಂಡಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ 10 ದಿನಗಳ ಕಾಲ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶಂಖನಾದ ಮೊಳಗಿಸಿ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು. ಕಾರ್ಯಕ್ರಮ ಪ್ರಾರಂಭಕ್ಕೂ ಮೊದಲು ಬಿಜೆಪಿ ನಾಯಕರು ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

BJP Padayatra (7)

ಸಮಾವೇಶದಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಮಾತನಾಡಿ, ಬಳ್ಳಾರಿ ಚಲೋ ಪಾದಯಾತ್ರೆಯುದ್ದಕ್ಕೂ ರಾಜ್ಯದ ಜನತೆ ಅವಿಸ್ಮರಣೀಯ ರೀತಿಯಲ್ಲಿ ಸ್ಪಂದಿಸಿದ್ದಾರೆ. ಇದು ಕೇವಲ ಪಾದಯಾತ್ರೆಯಲ್ಲ, ರಾಜ್ಯದ ಜನತೆ ಬಯಸಿರುವ ರಾಜಕೀಯ ಬದಲಾವಣೆಗೆ ಬರೆದಿರುವ ಮುನ್ನುಡಿ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುಂದೆಂದೂ ಅಧಿಕಾರಕ್ಕೆ ಬಾರದಂತೆ ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆಯ ಮೂಲಕ ನಮ್ಮ ಹೋರಾಟ ಪ್ರಾರಂಭವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಹಳ್ಳಿ ಹಳ್ಳಿಯಲ್ಲೂ ಕಾಂಗ್ರೆಸ್ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸಿ ಲೂಟಿಕೋರ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸುತ್ತೇವೆ. ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯರ - ಕಿರಿಯರ ಜೊತೆಗೊಡಿ ಪ್ರವಾಸ ಮಾಡಲಿದ್ದೇವೆ ಎಂದು ಹೇಳಿದರು.

BJP Padayatra (10)

ಬಿಜೆಪಿ ಪಾದಯಾತ್ರೆ ಸಮಾರೋಪದಲ್ಲಿ ಕೈಗೊಂಡ ನಿರ್ಣಯಗಳು

  1. ಮಹರ್ಷಿ ವಾಲ್ಮೀಕಿ ನಿಗಮದ ಖಾತೆಗೆ ಕನ್ನ ಹಾಕಿ ಲೂಟಿಯಾದ ರೂ. 187 ಕೋಟಿ ಹಣ ವಾಪಸ್‌ ನಿಗಮವನ್ನು ಸೇರುವಂತಾಗಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಹೈಕಮಾಂಡ್ ಸೇರಿದಂತೆ ತಪ್ಪಿತಸ್ಥರೆಲ್ಲರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸುತ್ತೇವೆ.
  2. ಬರ ಪ್ರದೇಶ ಘೋಷಣೆಯ ತಾರತಮ್ಯವನ್ನು ಖಂಡಿಸುತ್ತೇವೆ, ಬರ ನಿರ್ವಹಣೆಯ ವೈಫಲ್ಯವನ್ನೂ ಖಂಡಿಸುತ್ತೇವೆ. ಈ ಕೂಡಲೇ ವಾಸ್ತವ ಪರಿಸ್ಥಿತಿ ಆಧರಿಸಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಲಿ. ಬರ ನಿರ್ವಹಣೆಯನ್ನು ಸಮರ್ಪಕವಗಿ ನಿರ್ವಹಿಸಲಿ ಎಂದು ಒತ್ತಾಯಿಸುತ್ತೇವೆ.
  3. ಬರಗಾಲದಿಂದ ತತ್ತರಿಸಿರುವ ಅನ್ನದಾತ ರೈತರಿಗೆ ಈ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ರೈತರು ಪಡೆದಿರುವ ರೂ. 5 ಲಕ್ಷದ ವರೆಗಿನ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಮತ್ತು 3 ಫೇಸ್ ವಿದ್ಯುತ್ತನ್ನು ದಿನಕ್ಕೆ ಕನಿಷ್ಠ 10 ಗಂಟೆಗಳ ಕಾಲ ಪೂರೈಸಬೇಕು ಎಂದು ಒತ್ತಾಯಿಸುತ್ತೇವೆ.
  4. ಎಸ್‌ಇಎಸ್‌ಪಿ-ಟಿಎಸ್‌ಪಿ ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗಬೇಕಾಗಿರುವ ಹಣ ದುರ್ಬಳಕೆಯಾಗಿದ್ದು, ಈ ಸಂಬಂಧ ಈ ಕೂಡಲೇ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ಒತ್ತಾಯಿಸುತ್ತೇವೆ.
  5. ನವಿಲೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿರಿಸಿ, ಅತೀ ಜರೂರಾಗಿ ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.
  6. ನಿರುದ್ಯೋಗ ಸಮಸ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೃಹತ್ ಪ್ರಮಾಣದಲ್ಲಿ ಉದ್ಭವಿಸುತ್ತಿದ್ದು, ಸರ್ಕಾರ ಉದ್ಯೋಗ ಸೃಷ್ಟಿಗೆ ತುರ್ತು ಕ್ರಮ ವಹಿಸಬೇಕು, 2.5 ಲಕ್ಷ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬಕ್ಕೆ ಅವಕಾಶ ನೀಡದಂತೆ ಕೂಡಲೇ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸುತ್ತೇವೆ.
  7. ಕೆಪಿಎಸ್‌ಸಿ ಕರ್ಮಕಾಂಡಕ್ಕೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಭ್ರಷ್ಟ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ತನಿಖೆ ಚುರುಕುಗೊಳಿಸಬೇಕು, ಕೆಪಿಎಸ್‌ಸಿಗೆ ಕಾಯಕಲ್ಪ ನೀಡಲು ಶಾಶ್ವತವಾಗಿ ಪಾರದರ್ಶಕವಾಗಿ ಕಾರ್ಯ ನಿರ್ವಹಿಸುವಂತೆ ಸುಧಾರಣೆಯನ್ನು ತರಲು ಯುಪಿಎಸ್‌ಸಿ ಮಾದರಿ ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.
  8. ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಶೇಷ ಚೇತನರ ಪಿಂಚಣಿ ಸ್ಥಗಿತಗೊಳಿಸಿರುವ ಈ ಹೃದಯಹೀನ ಸರ್ಕಾರ ಕೂಡಲೇ ಮಾಸಿಕ ವೇತನ ಬಿಡುಗಡೆ ಮಾಡಬೇಕೆಂದು ಎಂದು ಒತ್ತಾಯಿಸುತ್ತೇವೆ.
  9. ಪಶುಸಂಗೋಪನೆ ಅವಲಂಬಿಸಿ ಜೀವನ ಸಾಗಿಸುತ್ತಿರುವ ರೈತರು ಹಾಗೂ ಗೋಪಾಲಕರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಸ್ಥಗಿತಗೊಂಡಿದ್ದು, ಈ ಕೂಡಲೇ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಹಾಗೂ ಈ ಯೋಜನೆ ಮುಂದುವರಿಸಬೇಕು ಎಂದು ಒತ್ತಾಯಿಸುತ್ತೇವೆ.
  10. ಗೃಹಲಕ್ಷ್ಮೀ ಯೋಜನೆಯ 5000 ಕೋಟಿ ಹಗರಣ ಮಹಿಳೆಯರಿಗೆ ಮಾಡಿದ ವಿದ್ರೋಹ. ಈ ಕೂಡಲೇ ಈ ಸಂಬಂಧ ತನಿಖೆ ಕೈಗೊಂಡು ಹಗರಣದ ರೂವಾರಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.
  11. ಹಳ್ಳಹಿಡಿದು ಕುಲಗೆಟ್ಟು ಹೋಗಿರುವ ರಸ್ತೆಗಳ ನಿರ್ಮಾಣಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ 200 ಕೋಟಿ ಪಿಡಬ್ಲ್ಯುಡಿ ಇಲಾಖೆಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇವೆ.
  12. ಯುವಜನರ ಬದುಕಿಗೆ ಕೊಳ್ಳಿ ಇಟ್ಟಿರುವ ಡ್ರಗ್ಸ್ ಮಾಫಿಯಾವನ್ನು ರಾಜ್ಯದಿಂದ ಬೇರು ಸಮೇತ ಕಿತ್ತೊಗೆಯಲು ವ್ಯಸನ ಮುಕ್ತ ಕರ್ನಾಟಕ" ಕ್ಕಾಗಿ ಸರ್ಕಾರ ಕೂಡಲೇ ಬದ್ಧತೆಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತೇವೆ.
  13. ವಿವಿಧ ಹಿಂದುಳಿದ ಸಮುದಾಯಗಳ ಅಭಿವೃದ್ಧಿ ನಿಗಮಗಳು ಅನುದಾನವಿಲ್ಲದೇ ಕೈ ಚೆಲ್ಲಿ ಕುಳಿತಿವೆ, ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಗಳು ನಿಂತು 3 ವರ್ಷಗಳೇ ಕಳೆದಿದೆ. ಬಿ.ಎಸ್.ಯಡಿಯೂರಪ್ಪನವರ ಆಡಳಿತ ಕಾಲದಲ್ಲಿ ರೂ. 780 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆರಳಣಿಕೆಯ ಕೋಟಿಗಳನ್ನೂ ಈ ನಿಗಮಗಳಿಗೆ ಬಿಡುಗಡೆ ಮಾಡಿಲ್ಲ. ಈ ಕೂಡಲೇ ರೂ 2000 ಕೋಟಿಗಳನ್ನು ಈ ಹಿಂದುಳಿದ ವರ್ಗಗಳ ನಿಗಮಗಳಿಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇವೆ.
  14. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು. ಹಾಗೂ ಅ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಆದ್ಯತೆಯ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸುತ್ತೇವೆ.
  15. ಕುಂಟು ನೆಪ ಒಡ್ಡಿ ಬಿಪಿಎಲ್ ಕಾರ್ಡ್ ರದ್ದು, ಮಾಡಿ ಬಡವರ ಅನ್ನದ ತಟ್ಟೆಗೆ ಕಲ್ಲು ಹಾಕಲಾಗುತ್ತಿದೆ. ತಕ್ಷಣ ಬಿಪಿಎಲ್ ಕಾರ್ಡ್ ರದ್ದತಿ ಅವೈಜ್ಞಾನಿಕ ಆದೇಶ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.
  16. ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ,ಜಿಲ್ಲಾ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ.

BJP Padayatra (9)

ಪಾದಯಾತ್ರೆ ಸಮರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ‌ಬಸವರಾಜ ಎಸ್.‌ ಬೊಮ್ಮಾಯಿ, ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ‌ ಮೋಹನ್‌ದಾಸ್‌ ಅಗರ್ವಾಲ್, ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಪದಾಧಿಕಾರಿಗಳು ಹಾಗೂ ಸಾವಿರಾರು ಕಾರ್ಯಕರು ಭಾಗಿಯಾಗಿದ್ದರು.